ಕಲ್ಲಿದ್ದಲು ಹಗರಣ: ಪ್ರಧಾನಿ ಕಚೇರಿ ಬೆಂಬಲಕ್ಕೆ ನಿಂತ ಖುರ್ಷಿದ್
ನವದೆಹಲಿ: ಹಿಂಡಾಲ್ಕೋ ಕಂಪನಿಗೆ ಕಲ್ಲಿದ್ದಲು ಘಟಕ ಹಂಚಿಕೆ ಮಾಡಿರುವುದರಲ್ಲಿ ಯಾವುದೇ ಅವ್ಯವಹಾರಗಳು ನಡೆದಿಲ್ಲ ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ ನೀಡಿದ ಬೆನ್ನಲ್ಲೇ ಇದೀಗ ವಿದೇಶಾಂಗ ವ್ಯವಹಾರ ಸಚಿವ ಸಲ್ಮಾನ್ ಖುರ್ಷಿದ್ ಪ್ರಧಾನಿ ಮನಮೋಹನ್ ಸಿಂಗ್ ಅವರ ಬೆಂಬಲಕ್ಕೆ ನಿಂತಿದ್ದಾರೆ.
ಪ್ರಧಾನಿ ಕಚೇರಿಗೆ ಬರುವ ಫೈಲ್ಗಳನ್ನು ಕಚೇರಿಯಲ್ಲಿರುವವರು ಪರಿಶೀಲನೆಗೊಳಪಡಿಸಿ ಅದನ್ನು ಪ್ರಧಾನಿಯವರಿಗೆ ಕಳುಹಿಸಿಕೊಡುತ್ತಾರೆ. ಪ್ರಧಾನಿ ಆ ಫೈಲ್ಗೆ ಸಹಿ ಹಾಕುವ ಮುನ್ನ ಅದರ ಪ್ರತೀ ಪುಟವನ್ನೂ ಓದಬೇಕು ಎಂದು ನೀವು ನಿರೀಕ್ಷಿಸುತ್ತಿದ್ದೀರಾ? ನಾನೂ ಒಬ್ಬ ಸಚಿವ. ಈ ರೀತಿ ಕೆಲಸ ಮಾಡಿದರೆ ಯಾವುದಾದರೂ ಕೆಲಸ ಪೂರ್ಣಗೊಳ್ಳುವುದುಂಟೇ? ಎಂದು ಖುರ್ಷಿದ್ ಪ್ರಶ್ನಿಸಿದ್ದಾರೆ.
ಇಲ್ಲಿ ಯಾವುದೇ ಅವ್ಯವಹಾರಗಳು ನಡೆದಿಲ್ಲ. ನಾವೊಂದು ನಿರ್ಧಾರವನ್ನು ತೆಗೆದುಕೊಂಡಿದ್ದೆವು. ಅದನ್ನು ಫೈಲ್ ಮಾಡಿದ ನಂತರ ಸ್ವೀಕರಿಸಿದ್ದೇವೆ ಎಂದು ಅವರು ಹೇಳಿದ್ದಾರೆ.
ಹಿಂಡಾಲ್ಕೋ ಕಂಪನಿಗೆ ತಲಬಿರಾ -2 ಮತ್ತು 3 ಕಲ್ಲಿದ್ದಲು ಘಟಕಗಳನ್ನು ಹಂಚಿಕೆ ಮಾಡಿರುವ ಬಗ್ಗೆ ಪ್ರಧಾನಿ ಕಚೇರಿ ಸ್ಪಷ್ಟನೆ ನೀಡಿದ ಬೆನ್ನಲ್ಲೇ ಪ್ರಧಾನಿಯವರನ್ನು ಬೆಂಬಲಿಸಿ ಖುರ್ಷಿದ್ ಈ ಹೇಳಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

