ಪ್ರಧಾನಿ ಚೀನಾ ಭೇಟಿ: ಗಡಿ ಸಮಸ್ಯೆ ಬಗ್ಗೆ ಮಾತುಕತೆ

ನವದೆಹಲಿ: ಪ್ರಧಾನಿ ಮನಮೋಹನ್ ಸಿಂಗ್ ಅವರ 5 ದಿನಗಳ ಚೀನಾ ಮತ್ತು ರಷ್ಯಾ ಪ್ರವಾಸದಲ್ಲಿ ಉಭಯ ದೇಶಗಳ ನಡುವೆ ಗಡಿಭಾಗದಲ್ಲಿ ಸಾಮರಸ್ಯ ಕಾಪಾಡುವ ಬಗ್ಗೆ ಮಾತುಕತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಈ ಭೇಟಿಯಲ್ಲಿ ಪ್ರಧಾನಿ ಭಾರತ ಮತ್ತು ಚೀನಾ ಗಡಿಪ್ರದೇಶದಲ್ಲಿನ ಸಮಸ್ಯೆಗಳ ಬಗ್ಗೆ ಚೀನಾ ಪ್ರಧಾನಿ ಲಿ ಕೇಕಿಯಾಂಗ್ ಅವರ ಜತೆ ಚರ್ಚೆ ನಡೆಸಲಿದ್ದಾರೆ ಎಂದು ಪ್ರವಾಸ ಕೈಗೊಳ್ಳುವ ಮುನ್ನ ಮಾಧ್ಯಮದವರಿಗೆ ನೀಡಿದ ಹೇಳಿಕೆಯಲ್ಲಿ ಪ್ರಧಾನಿ ಸಿಂಗ್ ತಿಳಿಸಿದ್ದಾರೆ.
ಆದಾಗ್ಯೂ, ರಷ್ಯಾ ಸಹಯೋಗದ ಕೂಡಂಕುಳಂ ವಿದ್ಯುತ್ ಸ್ಥಾವರದಲ್ಲಿ ಹೊಸ ಎರಡು ಅಣುಸ್ಥಾವರಗಳನ್ನು ನಿರ್ಮಿಸುವ ಒಪ್ಪಂದದ ಕುರಿತಾಗಿ ಯಾವುದೇ ಮಾತುಕತೆ ನಡೆಸುವ ಬಗ್ಗೆ ಪ್ರಧಾನಿ ಉಲ್ಲೇಖಿಸಿಲ್ಲ.
ಭಾರತ ಮತ್ತು ಚೀನಾ ನಡುವೆ ಐತಿಹಾಸಿಕವಾದ ಸಮಸ್ಯೆಗಳಿವೆ. ಆದ್ದರಿಂದ ಎರಡೂ ದೇಶಗಳು ತಮ್ಮ ಸ್ನೇಹಕ್ಕೆ ಧಕ್ಕೆ ಬಾರದಂತೆ ಪರಸ್ಪರ ಸಮಾಲೋಚನೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವುದಾಗಿ ಸಿಂಗ್ ಹೇಳಿದ್ದಾರೆ.
ಏತನ್ಮಧ್ಯೆ, ಭಾನುವಾರ ರಷ್ಯಾಗೆ ಪ್ರವಾಸ ಹೊರಟಿರುವ ಪ್ರಧಾನಿ ಅಲ್ಲಿ ನಡೆಯಲಿರುವ 14ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಇದಾದ ನಂತರ ಸೋಮವಾರ ರಷ್ಯಾದ ಅಧ್ಯಕ್ಷ ವ್ಲಾಡಮಿರ್ ಪುಟಿನ್ ಅವರನ್ನು ಭೇಟಿ ಮಾಡಲಿದ್ದಾರೆ.
ರಷ್ಯಾದ ಜತೆಗಿನ ನಮ್ಮ ಸಂಬಂಧ ಅನನ್ಯವಾದದ್ದು. ರಕ್ಷಣೆ, ಅಣುಶಕ್ತಿ, ವಿಜ್ಞಾನ ಮತ್ತು ತಂತ್ರಜ್ಞಾನ, ಹೈಡ್ರೋಕಾರ್ಬನ್, ವಾಣಿಜ್ಯ ಮತ್ತು ಹೂಡಿಕೆ ಮತ್ತು ಪರಸ್ಪರ ಮಾನವೀಯ ಸಂಬಂಧಗಳ ಬಗ್ಗೆ ರಷ್ಯಾ ಅಧ್ಯಕ್ಷರ ಜತೆಗೆ ಮಾತುಕತೆ ನಡೆಸಲಿದ್ದೇನೆ ಎಂದು ಪ್ರಧಾನಿ ಸಿಂಗ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


