ಶಿವಮೊಗ್ಗ: ಸಿಲಿಂಡರ್ ಸ್ಫೋಟ; ಲಾರಿಗೆ ಬೆಂಕಿ
ಶಿವಮೊಗ್ಗ: ಇಲ್ಲಿನ ಹುಲಿಕಲ್ ಘಾಟ್ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಅನಿಲ ಸೋರಿಕೆಯಿಂದಾಗಿ ಬೆಂಕಿಗಾಹುತಿಯಾದ ಘಟನೆ ಸೋಮವಾರ ಸಂಭವಿಸಿದೆ.
ಹಿಂದೂಸ್ತಾನ ಪೆಟ್ರೋಲಿಯಂ(ಹೆಚ್ಪಿ) ಸಂಸ್ಥೆಗೆ ಸೇರಿದ ಸುಮಾರು 90 ಸಿಲಿಂಡರ್ಗಳನ್ನು ಹೊತ್ತು ಸಾಗುತ್ತಿದ್ದ ಲಾರಿಗೆ ಹುಲಿಕಲ್ ಘಾಟ್ ಬಳಿ ಬೆಂಕಿ ಹೊತ್ತಿಕೊಂಡಿದ್ದು, ತಕ್ಷಣ ಲಾರಿಯ ಚಾಲಕ ಮತ್ತು ಕ್ಲೀನರ್ ಲಾರಿಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಬೆಂಕಿ ಹೊತ್ತಿಕೊಂಡಿದ್ದರಿಂದ ಲಾರಿಯಲ್ಲಿದ್ದ ಸಿಲಿಂಡರ್ಗಳು ಒಂದಾದ ನಂತರ ಒಂದು ಸ್ಫೋಟಗೊಂಡು. ಬೆಂಕಿಯ ಕೆನ್ನಾಲಿಗೆ ಸುಮಾರು 2 ಕಿ.ಮೀವರೆಗೆ ವ್ಯಾಪಿಸಿತ್ತು. ಇದರಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.
ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಕುಂದಾಪುರ ಮತ್ತು ತೀರ್ಥಹಳ್ಳಿ ಮೂಲದ ಎರಡು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಿಯರ ಮತ್ತು ಪೊಲೀಸರ ನೆರವಿನೊಂದಿಗೆ ಸತತ ಪ್ರಯತ್ನದಿಂದಾಗಿ ಸದ್ಯ ಬೆಂಕಿ ನಂದಿಸಲಾಗಿದೆ ಎಂದು ತೀರ್ಥಹಳ್ಳಿಯ ಅಗ್ನಿಶಾಮಕ ಅಧಿಕಾರಿ ಚಂದ್ರಪ್ಪ ಅವರು ತಿಳಿಸಿದ್ದಾರೆ. ಘಟನೆಯಲ್ಲಿ ಲಾರಿ ಸಂರ್ಪೂಣವಾಗಿ ಸುಟ್ಟು ಕರಕಲಾಗಿದೆ. ಆದರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದರು.
ಸ್ಫೋಟದಿಂದಾಗಿ ರಾಷ್ಟ್ರೀಯ ಹೆದ್ದಾರಿ ಎರಡು ಕಡೆ ಸಂಚಾರ ಬಂದ್ ಆಗಿದೆ. ಇದರಿಂದಾಗಿ ವಾಹನ ಸಂಚಾರರು ತೊಂದರೆಗೆ ಸಿಲುಕಿದ್ದಾರೆ. ಘಾಟ್ನ ಮಧ್ಯಭಾಗದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಇದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

