ಕಲ್ಲಿದ್ದಲು ಹಗರಣ: ಸುಪ್ರೀಂಗೆ ವಸ್ತುಸ್ಥಿತಿ ವರದಿ ಸಲ್ಲಿಸಿದ ಸಿಬಿಐ

ನವದೆಹಲಿ: ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣ ಸಂಬಂಧ ದಾಖಲಾಗಿದ್ದ 14 ಎಫ್ಐಆರ್ಗಳ ಕುರಿತ ತನಿಖೆಯ ವಸ್ತುಸ್ಥಿತಿ ವರದಿಯನ್ನು ಮಂಗಳವಾರ ಸಿಬಿಐ ಅಧಿಕಾರಿಗಳು ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದಾರೆ.
14 ಎಫ್ಐಆರ್ಗಳಿಗೆ ಸಂಬಂಧಿಸಿದ ತನಿಖೆಯ ವಸ್ತುಸ್ಥಿತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿಟ್ಟು ಸಿಬಿಐ ಅಧಿಕಾರಿಗಳು ಕೋರ್ಟ್ಗೆ ಸಲ್ಲಿಸಿದ್ದು, ಸಿಬಿಐ ಸಲ್ಲಿಸಿರುವ ವರದಿಯನ್ನು ಸುಪ್ರೀಂಕೋರ್ಟ್ ಅ.29ರಂದು ಪರಿಶೀಲನೆ ನಡೆಸುವ ಸಾಧ್ಯತೆ ಇದೆ.
ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣದಲ್ಲಿ ತಳುಕು ಹಾಕಿಕೊಂಡಿರುವ ಎಎಂಆರ್ ಐರೈನ್ ಮತ್ತು ಸ್ಟೀಲ್, ಎಲ್ಜೆಡಿ ಯಾವತ್ಮಲ್ ಎನರ್ಜಿ, ವಿನಿ ಐರೈನ್ ಮತ್ತು ಸ್ಟೀಲ್ ಉದ್ಯೋಗ್, ಜೆಎಎಸ್ ಇನ್ಫ್ರಾಸ್ಟ್ರಕ್ಚರ್, ವಿಕಾಶ್ ಮೆಟಲ್ಸ್, ಜಿಂದಾಲ್, ರಾತಿ ಸ್ಟೀಲ್, ಗ್ರೇಸ್ ಇಂಡಸ್ಟ್ರಿ, ಜಾರ್ಖಂಡ್ ಇಸ್ಪಾಟ್, ಗ್ರೀನ್ ಇನ್ಫ್ರಾಸ್ಟ್ರಕ್ಚರ್, ಹಿಂಡಾಲ್ಕೋ, ಕೆಎಂ ಬಿರ್ಲಾ ಸಂಸ್ಥೆಯ ಹೆಸರುಗಳನ್ನು ದಾಖಲಿಸಲಾಗಿದೆ.
ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೂ ನಡೆಸಿರುವ ತನಿಖೆಯ ಸ್ಥಿತಿಗತಿ ಬಗ್ಗೆ ಸಿಬಿಐ ವರದಿಯಲ್ಲಿ ಉಲ್ಲೇಖಿಸಿದೆ. ಅಲ್ಲದೆ ವರದಿಯಲ್ಲಿ ಉದ್ಯಮಿ ಕುಮಾರ ಮಂಗಲಂ ಬಿರ್ಲಾ ಮತ್ತು ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಪಾರೇಖ್ ವಿರುದ್ಧದ ಎಫ್ಐಆರ್ಗಳ ಕುರಿತ ವರದಿಯನ್ನು ಸಲ್ಲಿಸಿದೆ. ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಕಡತಗಳ ನಾಪತ್ತೆಗೆ ಕುರಿತಂತೆ ವರದಿಯಲ್ಲಿ ತಿಳಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಪ್ರಧಾನಿ ಕಾರ್ಯಾಲಯದ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಹೇಳಿದೆ.
ಇದೇ ವೇಳೆ, ಪ್ರಧಾನಿ ಕಾರ್ಯಾಲಯಕ್ಕೂ ಸಿಬಿಐ ಅಧಿಕಾರಿಗಳು ಪತ್ರ ಬರೆದಿದ್ದು, ಹಿಂಡಾಲ್ಕೋ ಕಂಪನಿಗೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳ ವಿವರವನ್ನು ನೀಡುವಂತೆ ಕೋರಿರುವುದಾಗಿ ವರದಿಯಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


