ವಿ.ಕೆ ಸಿಂಗ್ ತರಾಟೆಗೆ ತೆಗೆದುಕೊಂಡ ಸುಪ್ರೀಂ
ನವದೆಹಲಿ: ನ್ಯಾಯಾಲಯದ ತೀರ್ಪಿನ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ದ ಮಾಜಿ ಸೇನಾ ಮುಖ್ಯಸ್ಥ ವಿ.ಕೆ.ಸಿಂಗ್ ಅವರನ್ನು ಬುಧವಾರ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ವಯೋವುತಿ ವಿವಾದದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ನಿವೃತ್ತ ಸೇನಾ ಮುಖ್ಯಸ್ಥ ವಿ.ಕೆ ಸಿಂಗ್ ಸುಪ್ರೀ ಕೋರ್ಟ್ ಕೆಂಗಣ್ಣಿಗೆ ಗುರಿಯಾಗಿದ್ದರು.
ನ್ಯಾಯಾಲಯದ ತೀರ್ಪಿನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಪ್ರಚೋದಿಸಬೇಡಿ. ಇದು ನಿಮ್ಮ ಸ್ವಭಾವವನ್ನು ತೋರಿಸುತ್ತದೆ ಎಂದು ಸುಪ್ರೀಂ ಹೇಳಿದೆ.
ನವೆಂಬರ್ 20ರೊಳಗಾಗಿ ವಿ.ಕೆ ಸಿಂಗ್ ಅವರು ತಮ್ಮ ಸ್ಥಾನದ ಬಗ್ಗೆ ಉತ್ತರಿಸಬೇಕು ನ್ಯಾಯಾಲಯ ಸೂಚಿಸಿದೆ.
ಆಂಗ್ಲ ಮಾಧ್ಯಮ ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿಯನ್ನು ಆಧರಿಸಿ ಸುಪ್ರೀಂ ಕೋರ್ಟ್ ಕಳೆದ ತಿಂಗಳು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿತ್ತು.
ಅತ್ಯಾಚಾರಿಯೊಬ್ಬ ನೀಡಿದ ದಾಖಲೆಯನ್ನು ಆಧರಿಸಿ ನ್ಯಾಯಾಲಯ ಆತನನ್ನು ಬಾಲಪರಾಧಿ ಎಂದು ಆತನ ವಯಸ್ಸನ್ನು ತೀರ್ಮಾನಿಸುತ್ತದೆ. ಆದರೆ ನಾನು ನೀಡಿದ ದಾಖಲೆಗಳನ್ನು ಹಲವು ಬಾರಿ ಪರೀಶೀಲಿಸಿದರು, ಇನ್ನೂ ವಯೋವುತಿ ತೀರ್ಮಾನ ಕೈಗೊಳ್ಳುವುದರಲ್ಲಿ ಸುಪ್ರೀಂ ಕೋರ್ಟ್ ವೀಫಲವಾಗಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

