ಖ್ಯಾತ ಗಾಯಕ ಮನ್ನಾ ಡೇ ಇನ್ನಿಲ್ಲ

ಬೆಂಗಳೂರು: ಭಾರತದ ಖ್ಯಾತ ಹಿನ್ನೆಲೆ ಗಾಯಕ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತ ಮನ್ನಾ ಡೇ ಅವರು ಗುರುವಾರ ಬೆಳಗಿನ ಜಾವ ನಿಧನರಾಗಿದ್ದಾರೆ.
ಕಳೆದ ನಾಲ್ಕು ತಿಂಗಳಿಂದ ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದ 94 ವರ್ಷದ ಮನ್ನಾ ಡೇ ಅವರು ಇಂದು ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದ ಡೇ ಅವರು ಕಳೆದ ಜುಲೈನಲ್ಲಿ ನಗರದ ನಾರಾಯಣ ಆಸ್ಪತ್ರೆಗೆ ದಾಖಲಾಗಿದ್ದರು.
ನಾರಾಯಣ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿದ್ದ ಮನ್ನಾ ಡೇ ಅವರು ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ವಕ್ತಾರ ಕೆ.ಎಸ್.ವಾಸುಕಿ ಅವರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಸುಮಾರು 4 ಸಾವಿರಕ್ಕೂ ಹೆಚ್ಚು ಹಾಡುಗಳ ಮೂಲಕ ಜನಮಾನಸದಲ್ಲಿ ನೆಲೆಯಾಗಿದ್ದ ಬಹುಭಾಷ ಗಾಯಕ ಮನ್ನಾ ಡೇ ಅವರು ತಮ್ಮ ಇಬ್ಬರು ಪುತ್ರಿಯರಾದ ರಮಾ ಮತ್ತು ಸುಮಿತಾ ಅವರನ್ನು ಅಗಲಿದ್ದಾರೆ. ಕುಟುಂಬದ ಮೂಲಗಳ ಪ್ರಕಾರ, ಸುಮಿತಾ ಅವರು ಅಮೆರಿಕದಲ್ಲಿ ವಾಸವಾಗಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಡೇ ಅವರ ಪತ್ನಿ ಸುಲೋಚನಾ ಅವರು 2012 ಜನವರಿಯಲ್ಲಿ ಮೃತಪಟ್ಟಿದ್ದರು.
ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಮನ್ನಾ ಡೇ ಅವರ ಪಾರ್ಥಿವ ಶರೀರವನ್ನು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿಡಲಾಗಿದೆ.
1919, ಮೇ 1ರಂದು ಕೋಲ್ಕತಾದಲ್ಲಿ ಜನಸಿದ ಮನ್ನಾ ಡೇ ಅವರು, 50ಕ್ಕು ಹೆಚ್ಚು ವರ್ಷಗಳ ಕಾಲ ಮುಂಬೈಯಲ್ಲಿ ವಾಸವಾಗಿದ್ದರು. ನಂತರ ಬೆಂಗಳೂರಿಗೆ ಬಂದು ನೆಲೆಸಿದ್ದರು.ಕವ್ವಾಲಿಯಿಂದ ಹಿಡಿದು ವೇಗ ಆಧುನಿಕ ಹಾಡುಗಳವರೆಗೆ ಎಲ್ಲದರಲ್ಲಿಯೂ ಪ್ರತಿಭೆ ಮೆರೆದಿದ್ದ ಅವರು, ಹಿಂದಿ ಮತ್ತು ಬಂಗಾಳಿ ಚಿತ್ರಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಕಂಠದಾನ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


