ಈಗಿನ ಸುದ್ದಿ

ಗೆಲುವಿಗಾಗಿ ಅನುಕಂಪದ ಜಾಲ ಹಿಡಿದಿರುವ ಕಾಂಗ್ರೆಸ್: ನಾಯ್ಡು

Published On :

ಹೈದ್ರಾಬಾದ್: 2014ರ ಲೋಕಸಭಾ ಚುನಾವಣೆಯನ್ನು ದೃಷ್ಟಿಲಿಟ್ಟುಕೊಂಡು ಕಾಂಗ್ರೆಸ್ ಗೆಲುವಿಗಾಗಿ ಅನುಕಂಪದ ಜಾಲ ಹಿಡಿದಿದೆ ಎಂದು ಭಾರತೀಯ ಜನತಾ ಪಕ್ಷದ ಮುಖಂಡ ಎಂ ವೆಂಕಯ್ಯ ನಾಯ್ಡು ಗುರುವಾರ ಹೇಳಿದ್ದಾರೆ.

ಜನರ ಅನುಕಂಪ ಪಕ್ಷವನ್ನು ಗೆಲ್ಲಿಸುತ್ತದೆ ಎಂಬ ನಂಬಿಕೆ ಇಟ್ಟುಕೊಂಡಿರುವ ಕಾಂಗ್ರೆಸ್, ರಾಹುಲ್ ಮುಖಾಂತರ ಅನುಕಂಪವನ್ನು ಗಿಟ್ಟಿಸಲು ಪ್ರಯತ್ನಿಸುತ್ತಿದೆ ಎಂದು ನಾಯ್ಡು ಅಭಿಪ್ರಾಯಪಟ್ಟಿದ್ದಾರೆ.

ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಪ್ರಖ್ಯಾತಿಯನ್ನು ಕಾಂಗ್ರೆಸ್ ಸಹಿಸಿಕೊಳ್ಳುತ್ತಿಲ್ಲ. ಹಾಗಾಗಿ, ಕಾಂಗ್ರೆಸ್ ರಾಹುಲ್ ಮುಖಾಂತರ ಅನುಕಂಪದ ಕಥೆಯನ್ನು ಹೇಳಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಇಡೀ ವಿಶ್ವದಲ್ಲೇ ಮೋದಿ ಪ್ರಖ್ಯಾತಿ ಬೆಳೆಯುತ್ತಿದ್ದು, ಇದನ್ನು ಕಾಂಗ್ರೆಸ್ ಜೀರ್ಣಿಸಿಕೊಳ್ಳಲಾಗುತ್ತಿಲ್ಲ. ಅದಕ್ಕಾಗಿಯೇ ಜನರಲ್ಲಿ ಮೋದಿ ಮತ್ತು ಬಿಜೆಪಿ ಬಗ್ಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗಷ್ಟೇ ಕಾಂಗ್ರೆಸ್ ಮುಖಂಡರು ನಡೆಸಿರುವಂತಹ ಹಗರಣಗಳಿಗೆ ಉತ್ತರಿಸಲು ಕಾಂಗ್ರೆಸ್‌ಗೆ ಸಾಧ್ಯವಾಗುತ್ತಿಲ್ಲ. ಅಭಿವೃದ್ಧಿ ಕೆಲಸಗಳನ್ನು ಮಾಡಲಿಲ್ಲ ಎಂಬ ಜನರ ಆಕ್ರೋಶಕ್ಕೆ ಉತ್ತರಿಸಲು ಸಾಧ್ಯವಾಗದೇ, ಮುಗಿದು ಹೋಗಿರುವಂತಹ ಕಥೆಗಳನ್ನು ಹೇಳಿ ತಮ್ಮ ತಪ್ಪುಗಳನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿವೆ ಎಂದು ನಾಯ್ಡು ಕಿಡಿಕಾರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.