ವೈದ್ಯಕೀಯ ನಿರ್ಲಕ್ಷ್ಯ: 6 ಕೋಟಿ ನಷ್ಟ ಪರಿಹಾರ- ಸುಪ್ರೀಂ ಆದೇಶ
ನವದೆಹಲಿ: ಸತತ 15 ವರ್ಷಗಳ ಕಾಲ ನ್ಯಾಯಕ್ಕಾಗಿ ಹೋರಾಟ ನಡೆಸಿದ ಭಾರತೀಯ ಮೂಲದ (ಎನ್ಆರ್ಐ) ಡಾ. ಕುನಲ್ ಶಹಾ ಅವರಿಗೆ ಗುರುವಾರ ನ್ಯಾಯ ಸಿಕ್ಕಿದಂತಾಗಿದೆ.
ವೈದ್ಯಕೀಯ ನಿರ್ಲಕ್ಷ್ಯದಿಂದ ತಮ್ಮ ಪತ್ನಿಯನ್ನು ಕಳೆದುಕೊಂಡಿದ್ದ ಕುನಾಲ್ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಕಳೆದ 15 ವರ್ಷಗಳಿಂದ ನ್ಯಾಯಾಕ್ಕಾಗಿ ಕಾನೂನು ಹೋರಾಟ ನಡೆಸುತ್ತಿದ್ದರು.
ಇಂದು ಅವರ ಹೋರಾಟಕ್ಕೆ ಫಲ ಸಿಕ್ಕಿದಂತಾಗಿದೆ. ಕೊಲ್ಕತ್ತಾದ ಎಎಂಆರ್ಐ ಆಸ್ಪತ್ರೆಯು ಕುನಾಲ್ ಅವರಿಗೆ 6 ಕೋಟಿ ನಷ್ಟಪರಿಹಾರ ನೀಡಬೇಕಿದೆ.
1998ರಲ್ಲಿ ಕುನಾಲ್ ಅವರ ಪತ್ನಿ ಹಾಗೂ ವೃತ್ತಿಯಲ್ಲಿ ವೈದ್ಯೆಯಾಗಿದ್ದ ಅನುರಾಧ ಶಹಾ ಅವರು ಎಎಂಆರ್ಐ ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದರು.
ಇದಕ್ಕೆ ನಷ್ಟ ಪರಿಹಾರವಾಗಿ 5.96 ಕೋಟಿ ನೀಡುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದೆ.
ಮೂವರು ವೈದ್ಯರನ್ನು ಅಪರಾಧಿಗಳೆಂದು ಪರಿಗಣಿಸಲಾಗಿದ್ದು, ತಲಾ 10 ಲಕ್ಷ ನಷ್ಟ ಪರಿಹಾರವನ್ನು ಕುನಾಲ್ ಅವರಿಗೆ ನೀಡುವಂತೆ ಸೂಚಿಸಿದ್ದು, ಇನ್ನುಳಿದಂತ ಹಣವನ್ನು ಆಸ್ಪತ್ರೆಯ ಆಡಳಿತ ಮಂಡಳಿ ಪಾವತಿಸಬೇಕು ಎಂದು ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

