ಈಗಿನ ಸುದ್ದಿ

ಸಾರ್ವಜನಿಕ ಚರ್ಚೆಗೆ ಬನ್ನಿ: ದೀಕ್ಷಿತ್‌ಗೆ ಕೇಜ್ರಿ ಸವಾಲ್

Published On :

ನವದೆಹಲಿ: ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರನ್ನು ಸಾರ್ವಜನಿಕ ಚರ್ಚೆಗೆ ಬನ್ನಿ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಗುರುವಾರ ಆಹ್ವಾನಿಸಿದ್ದಾರೆ.

ಡಿಸೆಂಬರ್ 4ರಂದು ನಡೆಯಲಿರುವ ರಾಜ್ಯ ಚುನಾವಣೆಗೂ ಮುನ್ನವೇ ಸಾರ್ವಜನಿಕ ಚರ್ಚೆಗೆ ಬನ್ನಿ ಎಂದು ಶೀಲಾ ದೀಕ್ಷಿತ್ ಅವರಿಗೆ ಬಹಿರಂಗವಾಗಿ ಸವಾಲು ಹಾಕಿದ್ದಾರೆ.

ಅಧಿಕೃತ ಪ್ರಸ್ತಾವನೆ ಬಂದರೆ ಅವರು ಬಹಿರಂಗ ಚರ್ಚೆ ಬರಲು ಒಪ್ಪಿಕೊಳ್ಳಬಹುದು ಎಂದು ಪತ್ರಕರ್ತರೊಬ್ಬರು ಕೇಜ್ರಿವಾಲ್‌ಗೆ ಪ್ರಶ್ನಿಸಿದ್ದರು, ಈ ಹಿನ್ನಲೆಯಲ್ಲಿ ಕೇಜ್ರಿವಾಲ್ ಅವರು ನಿನ್ನೆ ದೀಕ್ಷಿತ್ ಅವರಿಗೆ ಪತ್ರ ಬರೆದಿದ್ದು, ಅಧಿಕೃತವಾಗಿಯೇ ನಾವು ನಿಮ್ಮನ್ನು ಸಾರ್ವಜನಿಕ ಚರ್ಚೆಗೆ ಆಹ್ವಾನಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ನಿಮಗೆ ಬೇಕಿದ್ದರೆ, ಈಗಷ್ಟೇ ಭಾರತೀಯ ಜನತಾ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆಗೊಂಡ ಹರ್ಷವರ್ಧನ್ ಅವರನ್ನು ಆಹ್ವಾನಿಸುತ್ತೇವೆ ಎಂದು ಹೇಳಿದ್ದಾರೆ.

ಈ ಚರ್ಚೆ ಯಾವುದೇ ಟಿವಿ ಸ್ಟುಡಿಯೋದಲ್ಲಿ ನಡೆಯುವುದಿಲ್ಲ. ಸಾರ್ವಜನಿಕ ಸ್ಥಳದಲ್ಲಿ ಸಾವಿರಾರು ಜನರ ಎದುರು ಚರ್ಚಿಸೋಣ. ರಾಜಧಾನಿಯ ಜನರು ನೇರವಾಗಿ ಕೇಳುವಂತಹ ಪ್ರಶ್ನೆಗಳಿಗೆ ಉತ್ತರಿಸೋಣ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

ಚರ್ಚೆಯನ್ನು ರಾಮಲೀಲಾ ಮೈದಾನದಲ್ಲೋ ಅಥವಾ ಬೇರೆ ಸಾರ್ವಜನಿಕ ಸ್ಥಳದಲ್ಲೋ ನಡೆಸೋಣ. ಇದರಿಂದಾಗಿ ಪ್ರತಿಯೊಬ್ಬ ನಾಗರಿಕನು ಪ್ರಶ್ನೆಯನ್ನು ಕೇಳುವಂತಹ ಅವಕಾಶ ಕಲ್ಪಿಸಿಕೊಟ್ಟಂತಾಗುತ್ತದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

2013ರ ಡಿಸೆಂಬರ್ ತಿಂಗಳಲ್ಲಿ ದೆಹಲಿಯಲ್ಲಿ ನಡೆಯುವು ವಿಧಾನಸಭೆ ಚುನಾವಣೆ ನಡೆಯಲಿದ್ದು, ಬಿಜೆಪಿ, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ನಡುವೆ ಪೈಪೋಟಿ ಹೆಚ್ಚಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.