ಈಗಿನ ಸುದ್ದಿ

ಒಡಿಶಾದಲ್ಲಿ ಪ್ರವಾಹ: 47 ಸಾವು

Published On :

ಭುಬನೇಶ್ವರ: ಒಡಿಶಾದಲ್ಲಿ ಭಾರಿ ಪ್ರವಾಹ ಉಂಟಾಗಿದ್ದು, 47 ಜನರು ಸಾವನ್ನಪ್ಪಿದ್ದಾರೆ ಎಂದು ಶುಕ್ರವಾರ ವರದಿ ಹೇಳಿದೆ.

ಭೀಕರ ಚಂಡಮಾರತದಿಂದಾಗಿ ಒಡಿಶಾದಲ್ಲಿ ಪ್ರವಾಹ ಹೆಚ್ಚಾಗಿದ್ದು, 129 ಹಳ್ಳಿಗಳು ಪ್ರವಾಹಕ್ಕೆ ತುತ್ತಾಗಿವೆ. ಒಡಿಶಾದ ಗಂಜಂ ಜಿಲ್ಲೆ ಮತ್ತು ಗಜಪತಿ ಪ್ರದೇಶದಲ್ಲಿ ಪ್ರವಾಹ ಉಂಟಾಗಿ ಸಂಚಾರ ಮಾರ್ಗಗಳು ಧ್ವಂಸಗೊಂಡಿದೆ.

ಚಂಡಮಾರತದಿಂದಾಗಿ ಕಳೆದ 4 ದಿನಗಳಿಂದ ಒಡಿಶಾದಲ್ಲಿ ಭಾರಿ ಮಳೆಯಾಗುತ್ತಿದ್ದು, 1.2 ಕೋಟಿ ಜನರು ನೆಲೆ ಕಳೆದುಕೊಂಡಿದ್ದಾರೆ. ಅಪಾಯದ ಮಟ್ಟ ಮೀರಿ ನದಿ ನೀರು ಹರಿಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಕರಾವಳಿ ಪ್ರದೇಶದ ಜನರಿಗೆ ಸ್ಥಳ ಬದಲಾಯಿಸಿ ಎಂದು ಎಚ್ಚರಿಕೆ ನೀಡಲಾಗಿದೆ. ಪತ್ರಾಪುರ್, ಸನ ಖೆಮುಂಡಿ, ಚಿಕ್ತಿ, ದಿಗಪ್ಪಾಂದಿ, ಹಿಂಜ್ಲಿ, ಶೆರಗಡ ಮತತು ಪುರೋಷೋತ್ಮಮ್‌ಪುರ್ ಪ್ರದೇಶದಲ್ಲಿ ಆಪತ್ತಿಗೆ ಸಿಲುಕಿದ್ದ 40 ಸಾವಿರ ಜನರನ್ನು ಸ್ಥಳಾಂತರಿಸಲಾಗಿದೆ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.