ಸಂತ್ರಸ್ತರೊಂದಿಗೆ ಐಎಸ್‌ಐ ನಂಟು: ರಾಹುಲ್ ಹೇಳಿಕೆಗೆ ಮುಸ್ಲಿಂ ಮುಖಂಡರು ಗರಂ

ನವದೆಹಲಿ: ಉತ್ತರ ಪ್ರದೇಶದ ಮುಜಾಫರ್‌ನಗರದ ಸಂತ್ರಸ್ತರ ಜೊತೆ ಪಾಕಿಸ್ತಾನದ ಐಎಸ್‌ಐ ಏಜೆಂಟರು ಸಂಪರ್ಕದಲ್ಲಿದ್ದಾರೆ ಎಂಬ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಯುವರಾಜನ ಹೇಳಿಕೆಗೆ ಮುಸ್ಲಿಂ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಈ ಸಂಬಂಧ ಪ್ರತಿಪಕ್ಷ ಬಿಜೆಪಿ ರಾಹುಲ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಶುಕ್ರವಾರ ಹೇಳಿದೆ.
ರಾಹುಲ್ ಹೇಳಿಕೆ ಬಗ್ಗೆ ಮುಸ್ಲಿಂ ಸಮುದಾಯದ ಪ್ರಮುಖ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಇದೊಂದು ದುರುದೃಷ್ಟಕರ ಎಂದಿದ್ದಾರೆ.
ದೇಶದ ಅಲ್ಪ ಸಂಖ್ಯಾತರ ಭಾವನೆಗಳಿಗೆ ಮತ್ತು ನಂಬಿಕೆಗೆ ಧಕ್ಕೆ ತರುವುದು ದೇಶಕ್ಕೆ ಮತ್ತು ಮುಸ್ಲಿಂರಿಗೆ ಅಗೌರವ ತೊರಿದಂತೆ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಹಿರಿಯ ಉಪಾಧ್ಯಕ್ಷ ಮೌಲಾನ್ ಕಲ್ಬೆ ಸಾದಿಖ್ ಅವರು ತಿಳಿಸಿದ್ದಾರೆ.
ಇಂತಹ ಹೇಳಿಕೆಗಳಿಂದ ಮುಸ್ಲಿಂ ಸಮುದಾಯದಕ್ಕೆ ಮಾತ್ರ ಧಕ್ಕೆಯಾಗುವುದಿಲ್ಲ. ಬದಲಾಗಿ ಕೋಮುಗಲಭೆಗಳನ್ನು ಸೃಷ್ಟಿಸುತ್ತವೆ ಎಂದು ಶಿಯಾ ಸಮುದಾಯದ ಪ್ರಮುಖ ಮುಖಂಡ ಮೌಲಾನ್ ಸೈಫ್ ಅಬ್ಬಾಸ್ ನಖ್ವಿ ಅವರು ಹೇಳಿದ್ದಾರೆ.
ಮಧ್ಯಪ್ರದೇಶದಲ್ಲಿ ಗುರುವಾರ ಚುನಾವಣಾ ಪ್ರಚಾರ ನಡೆಸಿದ ರಾಹುಲ್, ಬಿಜೆಪಿಯನ್ನು ತೆಗಳುವ ವೇಳೆಯಲ್ಲಿ ಮುಜಾಫರನಗರ ಗಲಭೆಯನ್ನು ಪ್ರಸ್ತಾಪಿಸಿದರು. ಉತ್ತರ ಪ್ರದೇಶದಲ್ಲಿ ಬಿಜೆಪಿ ಒಡೆದು ಆಳುವ ನೀತಿ ಅನುಸರಿಸುತ್ತಿದೆ. ಕೋಮುಗಲಭೆಗಳಿಗೆ ಆ ಪಕ್ಷವೇ ಕಾರಣ. ಅಲ್ಲಿನ ಕೋಮುಗಲಭೆಯಿಂದಾಗಿ ಅಲ್ಲಿನ 15 ಸಂತ್ರಸ್ತ ಯುವಕರನ್ನು ಸಂಪರ್ಕಿಸಲು ಪಾಕ್‌ನ ಐಎಸ್‌ಐ ಏಜೆಂಟರು ಹವಣಿಸುತ್ತಿದ್ದಾರೆ ಎಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


