ಈಗಿನ ಸುದ್ದಿ

ಭೂಗತ ಪಾತಕಿಗಳಿಂದ ಅಕ್ಷಯ್ ಕುಮಾರ್‌ಗೆ ಜೀವ ಬೆದರಿಕೆ

ಭೂಗತ ಪಾತಕಿಗಳಿಂದ ಅಕ್ಷಯ್ ಕುಮಾರ್‌ಗೆ ಜೀವ ಬೆದರಿಕೆ
Published On :

ಮುಂಬೈ: ಬಾಲಿವುಡ್ ಮೇಲೆ ಮತ್ತೆ ಭೂಗತ ಜಗತ್ತಿನ ಕಣ್ಣು ಬಿದ್ದಿದೆ. ಇತ್ತೀಚಗಷ್ಟೆ ಖ್ಯಾತ ಗಾಯಕ ಸೋನು ನಿಗಮ್‌ಗೆ ಜೀವ ಬೆದರಿಕೆ ಹಾಕಿದ್ದ ಭೂಗತ ಪಾತಕಿಗಳು, ಇದೀಗ ಬಾಲಿವುಡ್ ನಟ ಅಕ್ಷಯ್ ಕುಮಾರ್‌ಗೆ ಬೆದರಿಕೆ ಹಾಕಿದ್ದಾರೆ.

ಭೂಗತ ಪಾತಕಿಗಳಿಂದ ತಮಗೆ ಜೀವ ಬೆದರಿಕೆ ಕರೆ ಬಂದಿದೆ ಎಂದು ಅಕ್ಷಯ್ ಕುಮಾರ್ ದೂರು ನೀಡಿದ್ದಾರೆ. ಈ ಸಂಬಂಧ ಅವರು ಅಕ್ಟೋಬರ್ 22ರಂದು ಜುಹು ಪೊಲೀಸ್ ಠಾಣೆಗೆ ಪತ್ರ ಬರೆದಿದ್ದು, ತಮಗೆ ಸೂಕ್ತ ರಕ್ಷಣೆ ಒದಗಿಸುವಂತೆ ಮನವಿ ಮಾಡಿದ್ದಾರೆ.

ಇತ್ತೀಚಿಗೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತ ಚೋಟಾ ಶಕೀಲ್ ಸೋನು ನಿಗಮ್‌ಗೆ ಕರೆ ಮಾಡಿ, ಬೆದರಿಕೆ ಹಾಕಿದ್ದರು. ಅಲ್ಲದೆ ಕೆಲವು ತಿಂಗಳ ಹಿಂದೆ ನಿರ್ಮಾಪಕ ಬೋನಿ ಕಪೂರ್ ಹಾಗೂ ನಿರ್ದೇಶಕ ಕರಣ್ ಜೋಹರ್ ಸಹ ಭೂಗತ ಜಗತ್ತಿನಿಂದ ತಮಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂದು ಪೊಲೀಸರಿಗೆ ದೂರು ನೀಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.