ಈಗಿನ ಸುದ್ದಿ

ಕರ್ನಾಟಕಾಂಧ್ರ ಗಡಿ ವಿವಾದ: ಸರ್ವೇಗೆ ಸುಪ್ರೀಂ ಸೂಚನೆ

Published On :

ನವದೆಹಲಿ: ಕರ್ನಾಟಕ ಮತ್ತು ಆಂಧ್ರಪ್ರದೇಶದ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೇ ಮಾಡುವಂತೆ ಸರ್ವೇ ಜನರಲ್ ಆಫ್ ಇಂಡಿಯಾಗೆ ಸೋಮವಾರ ಸುಪ್ರೀಂಕೋರ್ಟ್ ಆದೇಶಿಸಿದೆ.

ಗಡಿ ರೇಖೆಗೆ ಸಂಬಂಧಿಸಿದಂತೆ ಹಲವಾರು ವರ್ಷಗಳಿಂದ ಕರ್ನಾಟಕ ಮತ್ತು ಆಂಧ್ರಪದೇಶದ ನಡುವೆ ವಿವಾದಕ್ಕೆ ಕಾರಣವಾಗಿತ್ತು. ಹೀಗಾಗಿ ಉಭಯ ರಾಜ್ಯಗಳ ನಡುವೆ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಇದಕ್ಕೆ ಅಂತ್ಯ ಹಾಡಲು ಸುಪ್ರೀಂಕೋರ್ಟ್ ನಿರ್ಧರಿಸಿದ್ದು, ಕರ್ನಾಟಕ-ಆಂಧ್ರ ನಡುವಣ ಬಳ್ಳಾರಿ ಪ್ರದೇಶದಲ್ಲಿ ಗಡಿ ಸರ್ವೇ ಮಾಡುವಂತೆ ಸುಪ್ರೀಂ ಅರಣ್ಯಪೀಠ ಆದೇಶಿಸಿದೆ. ಅಲ್ಲದೆ ಮುಂದಿನ ಆರು ವಾರಗಳಲ್ಲಿ ಸರ್ವೇಕಾರ್ಯ ಪೂರ್ಣಗೊಳಿಸಿ ವರದಿ ನೀಡುವಂತೆ ಸರ್ವೇ ಜನರಲ್ ಆಫ್ ಇಂಡಿಯಾಗೆ ಸೂಚಿಸಿದೆ.

ಗಡಿ ಸರ್ವೇಕಾರ್ಯ ಕೈಗೊಳ್ಳುವ ಸರ್ವೇ ಜನರಲ್ ಆಫ್ ಇಂಡಿಯಾಗೆ ಸಹಕರಿಸುವಂತೆ ಕರ್ನಾಟಕ ಮತ್ತು ಆಂಧ್ರ ಸರ್ಕಾರಗಳಿಗೆ ಕೋರ್ಟ್ ಸೂಚಿಸಿದ್ದು, ಸರ್ವೇಕಾರ್ಯಕ್ಕೆ  ಉಭಯ ರಾಜ್ಯಗಳು ಪೂರ್ಣಪ್ರಮಾಣದಲ್ಲಿ ಸಹಕರಿಸಿದರೆ ಮಾತ್ರ ಸರ್ವೇಕಾರ್ಯ ಪೂರ್ಣಗೊಳ್ಳಲು ಸಾಧ್ಯವಾಗುತ್ತದೆ ಎಂದು ಕೋರ್ಟ್ ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.