ರಾಹುಲ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ನವದೆಹಲಿ: ಮುಸ್ಲಿಂ ಯುವಕರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಭಾರತೀಯ ಜನತಾ ಪಕ್ಷ(ಬಿಜೆಪಿ) ಸೋಮವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಮುಜಾಫರ್‌ನಗರದ ಕೆಲ ಮುಸ್ಲಿಂ ಯುವಕರು ಪಾಕಿಸ್ತಾನ ಗುಪ್ತಚರ ಇಲಾಖೆ(ಐಎಸ್‌ಐ)ಯೊಂದಿಗೆ ಸಂಪರ್ಕವಿಟ್ಟುಕೊಂಡಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆ ತೀವ್ರ ಟೀಕೆಗೆ ಕಾರಣವಾಗಿತ್ತು. ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ, ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥರನ್ನು ಭೇಟಿ ಮಾಡಿ ದೂರು ಸಲ್ಲಿಸಿದರು.
ವಿವಾದಾತ್ಮಕ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ವಕ್ತಾರ ಮುಖ್ತಾರ್ ಅಬ್ಬಾಸ್ ನಖ್ವಿ ಅವರು, ರಾಹುಲ್ ಗಾಂಧಿ ಅವರು ದೇಶದ ಮುಸ್ಲಿಂ ಜನಾಂಗವನ್ನು ದೂಷಿಸಿದ್ದಾರೆ. ಅಲ್ಲದೆ ದೇಶದ ಏಕತೆಗೆ ಭಂಗ ತರುವಂತ ಹೇಳಿಕೆ ನೀಡಿದ್ದಾರೆ. ಹೀಗಾಗಿ ರಾಹುಲ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲುವಂತೆ ಚುನಾವಣಾ ಆಯೋಗಕ್ಕೆ ದೂರು ನೀಡದರು.
ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳು ಹತ್ತಿರವಾಗುತ್ತಿದ್ದು, ಈ ಸಂದರ್ಭದಲ್ಲಿ ಕಾಂಗ್ರೆಸ್ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಬಿಜೆಪಿ ಆರೋಪಿಸಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಲುವಂತೆ ಮನವಿ ಮಾಡಿದೆ.
ಕಳೆದ ವಾರ ರಾಜಸ್ಥಾನದ ಇಂದೊರ್‌ನಲ್ಲಿ ಪಕ್ಷದ ಪ್ರಚಾರದಲ್ಲಿ ತೊಡಗಿದ್ದ ರಾಹುಲ್ ಗಾಂಧಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ್ದರು. ಈ ವೇಳೆ ಮುಜಾಫರ್‌ನಗರದ ಕೆಲ ಮುಸ್ಲಿಂ ಯುವಕರು ಪಾಕಿಸ್ತಾನ ಗುಪ್ತಚರ ಇಲಾಖೆಯೊಂದಿಗೆ ಸಂಪರ್ಕವಿಟ್ಟುಕೊಂಡಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದರು. ಈ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೆ ರಾಹುಲ್ ಹೇಳಿಕೆ ವಿರುದ್ಧ ರಾಜಕೀಯ ಪಕ್ಷಗಳು ಮತ್ತು ಕೆಲ ಮುಸ್ಲಿಂ ಸಂಘಟನೆಗಳು ಕಿಡಿಕಾರಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


