ಶಾಸಕ ಕಾಶಪ್ಪನವರ್ ವಿರುದ್ಧದ ಕೇಸ್ ವಜಾ
ಬಾಗಲಕೋಟೆ: ಹುನಗುಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಮೇಲಿನ ಕ್ರಿಮಿನಲ್ ಪ್ರಕರಣವನ್ನು ಜಿಲ್ಲಾ ಸತ್ರ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ.
2009ರ ಫೆ.6ರಂದು ವಿಜಯಾನಂದ ಕಾಶಪ್ಪನವರ ಹಾಗೂ ಅವರ ಬೆಂಬಲಿಗರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಹೆರೂರ ಗ್ರಾಮದ ಮಲ್ಲಿಕಾರ್ಜುನ ಶಿವನಾಗಪ್ಪ ಕೊಡಗಲಿ ಎಂಬುವರು ಇಳಕಲ್ಲ ಠಾಣೆಯಲ್ಲಿ ದೂರು ನೀಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಾನಂದ ಕಾಶಪ್ಪನವರ್ ವಿರುದ್ಧ ಐಪಿಸಿ ಸೆಕ್ಷನ್ 307ರ ಅನ್ವಯ ಕೊಲೆ ಯತ್ನ ಸೇರಿದಂತೆ 10 ಸೆಕ್ಷನ್ಗಳ ಅನ್ವಯ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು, ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ಪೂರ್ಣಗೊಂಡಿದ್ದು, ಅ.22ರಂದು ತೀರ್ಪು ಪ್ರಕಟಿಸಲು ದಿನಾಂಕ ನಿಗದಿಯಾಗಿತ್ತು. ಆನಂತರ ತೀರ್ಪುನ್ನು ಅ.24 ಮುಂದೂಡಲ್ಪಟ್ಟಿತ್ತು. ಆದರೆ ಇಂದು ಪ್ರಕರಣದ ತೀರ್ಪು ಪ್ರಕಟಿಸಿರುವ ಕೋರ್ಟ್ ಕಾಶಪ್ಪನವರ ಮೇಲಿನ ಪ್ರಕರಣವನ್ನು ವಜಾಗೊಳಿಸಿ ತೀರ್ಪು ನೀಡಿದೆ.
ಒಂದು ವೇಳೆ ಪ್ರಕರಣದ ಸಂಬಂಧ ಕಾಶಪ್ಪನವರ್ ಅವರಿಗೆ ಶಿಕ್ಷೆಯಾಗಿದ್ದರೆ. ಸುಪ್ರೀಂಕೋರ್ಟ್ ಇತ್ತೀಚೆಗೆ ನೀಡಿದ್ದ ಜನಪ್ರತಿನಿಧಿ ಅನರ್ಹತಾ ತೀರ್ಪಿನನ್ವಯ ಅವರು ಶಾಸಕ ಸ್ಥಾನ ಕಳೆದುಕೊಳ್ಳುತ್ತಿದ್ದ ಕರ್ನಾಟಕದ ಮೊದಲ ಶಾಸಕ ಎಂಬ ಅಪಖ್ಯಾತಿಗೆ ಒಳಗಾಗಬೇಕಿತ್ತು. ಸದ್ಯ ಪ್ರಕರಣದಿಂದ ಕಾಶಪ್ಪನವರ್ ಬಜಾವ್ ಆಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

