ಈಗಿನ ಸುದ್ದಿ

ಬಿಜೆಪಿ ಪಾಟ್ನಾ ಸರಣಿ ಸ್ಫೋಟದ ಲಾಭ ಪಡೆದುಕೊಳ್ಳಲಿದೆ: ದಿಗ್ವಿಜಯ್ ಸಿಂಗ್

Published On :

ನವದೆಹಲಿ: ಭಾರತೀಯ ಜನತಾ ಪಕ್ಷ(ಬಿಜೆಪಿ) ಪಾಟ್ನಾ ಸರಣಿ ಸ್ಫೋಟದ ಲಾಭ ಪಡೆದುಕೊಳ್ಳಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಾಟ್ನಾ ಸರಣಿ ಸ್ಫೋಟ ಬಿಜೆಪಿಗೆ ಲಾಭವಾಗಿ ಪರಿಣಮಿಸಲಿದೆ. ಇದನ್ನೆ ಮುಂದಿಟ್ಟುಕೊಂಡು ಬಿಜೆಪಿ ಮತ ಬೇಟೆಯಲ್ಲಿ ತೊಡಗಲಿದೆ ಎಂದರು. ಇದೇ ವೇಳೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಸರ್ಕಾರ ಭದ್ರತೆ ಲೋಪ ಏಸಗಿರುವುದು ಮೆಲ್ನೋಟ್ಟಕ್ಕೆ ಗೋಚರಿಸುತ್ತಿದೆ. ಹೀಗಾಗಿ ಬಿಹಾರ ಸರ್ಕಾರ ಇದರ ಹೊಣೆ ಒತ್ತುಕೊಳ್ಳಬೇಕಿದೆ ಎಂದರು.

ಹಿಂಸಾಚಾರ ಕೃತ್ಯಗಳನ್ನು ಕಾಂಗ್ರೆಸ್ ಸಹ ತೀವ್ರವಾಗಿ ಖಂಡಿಸುತ್ತದೆ. ಇಂತಹ ಘಟನೆಗಳು ಮುಂದೆ ಸಂಭವಿಸಿದಂತೆ ನೋಡಿಕೊಳ್ಳಬೇಕಿದೆ ಎಂದರು.

ಮೋದಿ ಅವರ 'ಹೂಂಕಾರ್ ರ್ಯಾಲಿ' ಆರಂಭಕ್ಕೆ ಮುನ್ನವೇ ಬಿಹಾರ ರಾಜಧಾನಿ ಪಟನಾದಲ್ಲಿ 8 ಅಲ್ಪಪ್ರಮಾಣದ ಸರಣಿ ಸ್ಫೋಟಗಳು ಸಂಭವಿಸಿತ್ತು. ಈ ದುರಂತದಲ್ಲಿ ಆರು ಮಂದಿ ಅಸುನೀಗಿದ್ದಾರೆ. 83 ಮಂದಿ ಗಾಯಗೊಂಡಿದ್ದಾರೆ. ನಿನ್ನೆ ಬೆಳಗ್ಗೆ 9.30ರ ಸುಮಾರಿಗೆ ಪಟನಾ ರೇಲ್ವೆ ನಿಲ್ದಾಣದ ಪ್ಲಾಟ್‌ಫಾರಂ ಸಂಖ್ಯೆ 10ರಲ್ಲಿ ಮೊದಲ ಸ್ಫೋಟ ಸಂಭವಿಸಿತು. ಇದಾದ ಬಳಿಕ ರ್ಯಾಲಿ ನಡೆಯಬೇಕಾಗಿದ್ದ ಬೆಳಗ್ಗೆ 11.40ರಿಂದ 11.45ರ ನಡುವಿನ ಅವಧಿಯಲ್ಲಿ ಗಾಂಧಿ ಮೈದಾನ ಸುತ್ತಮುತ್ತ ಆರು ಅಲ್ಪಪ್ರಮಾಣದ ಸ್ಫೋಟಗಳು ಸಂಭವಿಸಿದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.