ಈಗಿನ ಸುದ್ದಿ

ಮೋದಿಗೆ ಸಂಪೂರ್ಣ ಭದ್ರತೆ ನೀಡಲಾಗಿದೆ: ಶಿಂಧೆ

ಮೋದಿಗೆ ಸಂಪೂರ್ಣ ಭದ್ರತೆ ನೀಡಲಾಗಿದೆ: ಶಿಂಧೆ
Published On :

ನವದೆಹಲಿ: ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂದೆ ಅವರು ಸೋಮವಾರ ಹೇಳಿದ್ದಾರೆ.

ಪಾಟ್ನಾದಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿದ ಮಾರನೇ ದಿನವೇ ಮುಂಬೈಯಲ್ಲಿ ಸಿನಿಮಾ ಸಂಗೀತ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಸಿ, ನಟಿ ಕಂಗನಾ ರಾಣಾವತ್ ಅವರಿಗೆ ಪೋಸ್ ನೀಡಿದ್ದಕ್ಕೆ ಶಿಂದೆ ವಿರುದ್ಧ ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸಿದ್ದವು. ಆದರೆ ತಾವು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದನ್ನು ಸಮರ್ಥಿಸಿಕೊಂಡಿರುವ ಶಿಂದೆ, ಪಾಟ್ನಾ ಸರಣಿ ಸ್ಫೋಟಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಎಲ್ಲ ಮಾಹಿತಿಯನ್ನು ಪಡೆದುಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ನಾಳೆ ಸ್ಫೋಟ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುವುದಾಗಿ ಹೇಳಿದ್ದಾರೆ.

ಮೋದಿ ಭದ್ರತೆ ಕುರಿತ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ಭಾರತ ಸರ್ಕಾರ ಗುಜರಾತ್ ಮುಖ್ಯಮಂತ್ರಿಗಳಿಗೆ ಬೇಕಾದ ಅಗತ್ಯ ಭದ್ರತೆಯನ್ನು ಒದಗಿಸಿದೆ ಎಂದರು.

ನಮ್ಮ ಸರ್ಕಾರ ಅವರಿಗೆ ಎಲ್ಲ ರೀತಿಯ ಭದ್ರತೆಯನ್ನು ಒದಗಿಸಿದೆ. ನಾಳೆ ನಾನು ಪಾಟ್ನಾಗೆ ಭೇಟಿ ನೀಡಿ, ಪರಿಸ್ಥಿತಿಯನ್ನು ಪರಿಶೀಲಿಸುತ್ತೇನೆ. ನಂತರ ಪ್ರಕರಣದ ತನಿಖೆಯ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡುವುದಾಗಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.