ಪಾಕ್‌ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ, ಗುಂಡಿನ ದಾಳಿ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಸೈನಿಕರು ಭಾರತೀಯ ಸೇನಾ ನೆಲೆಗಳ ಮೇಲೆ ಮಂಗಳವಾರ ಗುಂಡಿನ ದಾಳಿ ನಡೆಸಿದ್ದಾರೆ.
ಕಳೆದ ಮೂರು ದಿನಗಳಿಂದ ನಿರಂತರವಾಗಿ ಪಾಕಿಸ್ತಾನಿ ಸೈನಿಕರು ಭಾರತೀಯ ಸೇನಾ ನೆಲೆಗಳ ಮೇಲೆ ಅಪ್ರಚೋದಿತ ದಾಳಿ ನಡೆಸುತ್ತಿದ್ದು, ಪಾಕ್ ಸೈನಿಕರ ದಾಳಿಗೆ ಪ್ರತಿಯಾಗಿ ಭಾರತೀಯ ಯೋಧರು ದಿಟ್ಟ ಉತ್ತರ ನೀಡಿದ್ದಾರೆ ಎಂದು ರಕ್ಷಣಾ ಇಲಾಖೆ ವಕ್ತಾರ ಆರ್.ಕೆ ಪಾಲ್ಟ ಅವರು ತಿಳಿಸಿದ್ದಾರೆ.
ಭಾರತೀಯ ಗಡಿ ನಿಯಂತ್ರಣ ರೇಖೆ(ಎಲ್‌ಒಸಿ)ಯ ಪೂಂಚ್‌ನ ಗಂಭೀರ್ ಮತ್ತು ಬಿಮ್ಮಬರ್ ಸೆಕ್ಟರ್ ಬಳಿ ಬೆಳಿಗ್ಗೆ 5.30ರ ಸಮಯದಲ್ಲಿ ಆರಂಭವಾದ ದಾಳಿ ಸುಮಾರು 7 ಗಂಟೆಯವರೆಗೂ ನಡೆದಿತ್ತು. ಪಾಕ್ ಸೈನಿಕರು ಸಣ್ಣ ಶಸ್ತ್ರಾಸ್ತ್ರಗಳು ಮತ್ತು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಗುಂಡಿನ ದಾಳಿ ನಡೆಸಿದರು. ಇದಕ್ಕೆ ಪ್ರತಿಯಾಗಿ ಭಾರತೀಯ ಯೋಧರು ಪ್ರತಿದಾಳಿ ನಡೆಸಿದರು. ಈ ಅನಿರೀಕ್ಷಿತ ದಾಳಿಯಿಂದಾಗಿ ಗಡಿ ಭಾಗದಲ್ಲಿ ಬಿಗುವಿನ ವಾತಾವರಣಾ ಸೃಷ್ಟಿಯಾಗಿದೆ ಎಂದರು.
ಪಾಕ್ ಸೈನಿಕರ ದಾಳಿಯಿಂದಾಗಿ ಯಾವುದೇ ರೀತಿಯ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಅವರು ತಿಳಿಸಿದ್ದಾರೆ.
ಗಡಿ ಭಾಗದಲ್ಲಿ ನಿರಂತರವಾಗಿ ಗುಂಡಿನ ದಾಳಿಗಳು ನಡೆಯುತ್ತಿರುವುದರಿಂದ ಅಲ್ಲಿನ ನಿವಾಸಿಗಳು ವಲಸೆ ಹೋಗುತ್ತಿದ್ದಾರೆ. ಪ್ರಸಕ್ತ ವರ್ಷದಲ್ಲಿ ಪಾಕ್ ಸೈನಿಕರು ಸುಮಾರು 133 ಬಾರಿ ಕದನ ವಿರಾಮ ಉಲ್ಲಂಘಿಸಿದ್ದಾರೆ. ಇದು ಕಳೆದ ಎಂಟು ವರ್ಷಗಳಲ್ಲೇ ಅತೀ ಹೆಚ್ಚಿನ ಕದನ ವಿರಾಮ ಉಲ್ಲಂಘನೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

