ಈಗಿನ ಸುದ್ದಿ

ಪಾಟ್ನಾದ ಗಾಂಧಿ ಮೈದಾನದಲ್ಲಿ ಮತ್ತೊಂದು ಜೀವಂತ ಬಾಂಬ್ ಪತ್ತೆ

ಪಾಟ್ನಾದ ಗಾಂಧಿ ಮೈದಾನದಲ್ಲಿ ಮತ್ತೊಂದು ಜೀವಂತ ಬಾಂಬ್ ಪತ್ತೆ
Published On :

ಪಾಟ್ನಾ: ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಹೂಂಕಾರ್ ರ್ಯಾಲಿ ನಡೆದ ಬಿಹಾರದ ಪಾಟ್ನಾದಲ್ಲಿರುವ ಮಹಾತ್ಮ ಗಾಂಧಿ ಮೈದಾನದಲ್ಲಿ ಮಂಗಳವಾರ ಮತ್ತೊಂದು ಜೀವಂತ ಬಾಂಬ್ ಪತ್ತೆಯಾಗಿದೆ.

ಇಂದು ಮೈದಾನದಲ್ಲಿ ಪತ್ತೆಯಾದ ಜೀವಂತ ಬಾಂಬ್ ಅನ್ನು ಪೊಲೀಸರು ನಿಷ್ಕಿಯಗೊಳಿಸಿದ್ದಾರೆ. ಕಳೆದ ಭಾನುವಾರ ಮೋದಿ ರ್ಯಾಲಿಗೂ ಮುನ್ನ 7 ಸರಣಿ ಬಾಂಬ್ ಸ್ಫೋಟಗೊಂಡಿದ್ದವು. ಘಟನೆಯಲ್ಲಿ ಐವರು ಮೃತಪಟ್ಟು, 83ಕ್ಕು ಹೆಚ್ಚು ಮಂದಿ ಗಾಯಗೊಂಡಿದ್ದರು.

ಶಂಕಿತ ನ್ಯಾಯಾಂಗ ಬಂಧನಕ್ಕೆ
ಭಾನುವಾರದ ಸರಣಿ ಸ್ಫೋಟ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಈ ಸಂಬಂಧ ನಿನ್ನೆ ಪಾಟ್ನಾದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದರು. ಬಂಧಿತ ಶಂಕಿತ ಉಗ್ರ ಮೊಹ್ಮದ್ ಇಮ್ತಿಯಾಜ್ ಅನ್ಸಾರಿಯನ್ನು ಇಂದು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ ಆತನಿಗೆ ಒಂದು ವಾರಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ರಾಂಚಿ ನಿವಾಸಿಯಾಗಿರುವ ಅನ್ಸಾರಿಯನ್ನು ನಿನ್ನೆ ಪಾಟ್ನಾ ರೇಲ್ವೆ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದರು.

ನಾಳೆ ಬಿಹಾರ ಮುಖ್ಯಮಂತ್ರಿಯಿಂದ ಶಿಂದೆ ಭೇಟಿ
ಮೋದಿ ರ್ಯಾಲಿ ವೇಳೆ ಉಗ್ರ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರ ಬಿಹಾರ ಸರ್ಕಾರಕ್ಕೆ ಮುನ್ಸೂಚನೆ ನೀಡಿತ್ತು ಎಂದು ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂದೆ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಈ ಸಂಬಂಧ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ನಾಳೆ ದೆಹಲಿಯಲ್ಲಿ ತಮ್ಮನ್ನು ಭೇಟಿ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.