ಸೈನೇಡ್ ಮಲ್ಲಿಕಾಗೆ ಜೀವಾವಧಿ ಶಿಕ್ಷೆ

ಮಂಡ್ಯ: ದೇವಾಲಯಗಳಿಗೆ ಬರುತ್ತಿದ್ದ ಶ್ರೀಮಂತ ಒಂಟಿ ಮಹಿಳೆಯರಿಗೆ ಸೈನೇಡ್ ನೀಡಿ ಹತ್ಯೆ ಮಾಡುತ್ತಿದ್ದ 'ಸೈನೇಡ್ ಮಲ್ಲಿಕಾ' ಎಂದೇ ಕುಖ್ಯಾತರಾಗಿದ್ದ ಮಲ್ಲಿಕಾಗೆ ಮಂಡ್ಯದ 1ನೇ ಹೆಚ್ಚುವರಿ ಜಿಲ್ಲಾ ಕೋರ್ಟ್ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ.
2007ರ ಡಿಸೆಂಬರ್ 18ರಂದು ಮದ್ದೂರು ತಾಲೂಕಿನ ವೈಜನಾಥಪುರದ ಶ್ರೀವೈಜನಾಥೇಶ್ವರ ದೇವಾಲಯಕ್ಕೆ ಬಂದಿದ್ದ ಪೀಳಮ್ಮಗೆ ಸೈನೇಡ್ ನೀಡಿ ಕೊಲೆ ಮಾಡಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತೀರ್ಪು ನೀಡಿದ ಕೋರ್ಟ್ ಮಲ್ಲಿಕಾಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ಈ ಕೊಲೆಗೆ ಸಂಬಂಧಿಸಿದಂತೆ ಮದ್ದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ವೈದ್ಯಕೀಯ ಪರೀಕ್ಷೆ ನಡೆಸಿದ ವೈದ್ಯರು ಸಹ ಪೀಳಮ್ಮ ಅವರು ಸೈನೇಡ್ ಸೇವಿಸಿದ್ದರಿಂದ ಸಾವನ್ನಪ್ಪಿರುವುದಾಗಿ ವರದಿ ನೀಡಿತ್ತು. ಈ ವರದಿ ಆಧಾರದ ಮೇಲೆ ಜಿಲ್ಲಾ ನ್ಯಾಯಾಲಯ ಮಲ್ಲಿಕಾಗೆ ಶಿಕ್ಷೆ ವಿಧಿಸಿದೆ.
ಬೆಂಗಳೂರಿನ ನಿವಾಸಿಯಾಗಿರುವ ಮಲ್ಲಿಕಾ ದೇವಾಲಯಕ್ಕೆ ಬರುವ ಮಹಿಳೆಯರನ್ನು ಮಾತಿನ ಮೋಡಿಗೆ ಸಿಲುಕಿಸಿ ಅವರಿಗೆ ಸೈನೇಡ್ ನೀಡಿ ಕೊಲೆಗೈಯುತ್ತಿದ್ದಳು. ಹೀಗೆ ರಾಜ್ಯದ ವಿವಿಧೆಡೆ ಆರು ಮಂದಿ ಮಹಿಳೆಯರನ್ನು ಹತ್ಯೆ ಮಾಡಿ ಅವರ ಬಳಿಯಿದ್ದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗುತ್ತಿದ್ದಳು. ಬೆಂಗಳೂರಿನ ಕಲಾಸಿಪಾಳ್ಯದ ಪೊಲೀಸ್ ಇನ್ಸ್ಪೆಕ್ಟರ್ ಉಮೇಶ್ ಅವರ ಕೈಗೆ ಸಿಕ್ಕಿಬಿದ್ದಿದ್ದ ಈಕೆಯನ್ನು ವಿಚಾರಣೆಗೆ ಒಳಪಡಿಸಿದಾಗ ಈ ಆಘಾತಕಾರಿ ಅಂಶ ಬಯಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


