ಈಗಿನ ಸುದ್ದಿ

ಪಾಟ್ನಾ ಸ್ಫೋಟ; ತನಿಖೆಯನ್ನು ಎನ್‌ಐಎ ವಹಿಸಲಾಗಿದೆ: ಶಿಂಧೆ

Published On :

ನವದೆಹಲಿ: ಪಾಟ್ನಾದಲ್ಲಿ ನಡೆದ ಸರಣಿ ಸ್ಪೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ತಂಡ(ಎನ್‌ಐಎ)ಕ್ಕೆ ವಹಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರು ಬುಧವಾರ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಗೃಹ ಸಚಿವರನ್ನು ಭೇಟಿ ಮಾಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಪಾಟ್ನಾ ಸರಣಿ ಸ್ಫೋಟ ಪ್ರಕರಣವನ್ನು ಎನ್‌ಐಎ ತನಿಖೆಗೆ ನೀಡಬೇಕು ಎಂದು ಮನವಿ ಮಾಡಿದ್ದರು. ಹೀಗಾಗಿ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಲಾಗಿದೆ ಎಂದು ಶಿಂಧೆ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಬೇಕು ಎಂದು ನಿತೀಶ್ ಕುಮಾರ್ ಪತ್ರದ ಮೂಲಕ ಮನವಿ ಮಾಡಿದ್ದರು.

ಪಾಟ್ನಾ ಸರಣಿ ಸ್ಫೋಟಕ್ಕೆ ಸಂಬಂಧಿಸಿದಂತೆ ಬಿಹಾರ ಮುಖ್ಯಮಂತ್ರಿಯನ್ನು ಗೃಹ ಸಚಿವರು ಮಂಗಳವಾರವೇ ಭೇಟಿ ಮಾಡಬೇಕಿತ್ತು. ಆದರೆ ನಿತೀಶ್ ಕುಮಾರ್ ಅವರ ಅಲಭ್ಯತೆಯಿಂದಾಗಿ ಸಚಿವರು ತಮ್ಮ ಭೇಟಿಯನ್ನು ಮುಂದೂಡಿದ್ದರು.

ಭಾನುವಾರ ಬಿಹಾರದ ಪಾಟ್ನಾದಲ್ಲಿರುವ ಮಹಾತ್ಮ ಗಾಂಧಿ ಮೈದಾನದಲ್ಲಿ ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಹೂಂಕಾರ್ ರ್ಯಾಲಿ ಮುನ್ನ ಹಾಗೂ ರ್ಯಾಲಿ ಸಂದರ್ಭದಲ್ಲಿ 7 ಸರಣಿ ಬಾಂಬ್ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಸುಮಾರು 6 ಮಂದಿ ಮೃತಪಟ್ಟಿದ್ದು, 83 ಮಂದಿ ಗಾಯಗೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೋದಿ ಅವರಿಗೆ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಅವರ ರ್ಯಾಲಿಗೆ ಸಮರ್ಪಕ ಭದ್ರತೆ ಒದಗಿಸಿರಲಿಲ್ಲ. ರ್ಯಾಲಿಗೆ ಬರುವಂತ ಜನರನ್ನು ಸರಿಯಾದ ರೀತಿಯಲ್ಲಿ ಬಿಹಾರ ಪೊಲೀಸರು ತಪಾಸಣೆ ನಡೆಸಿಲ್ಲ. ಹೀಗಾಗಿ ಸರಿಯಾದ ಭದ್ರತೆ ಒದಗಿಸುವಲ್ಲಿ ನಿತೀಶ್ ಸರ್ಕಾರ ಎಡವಿದೆ ಎಂದು ಬಿಜೆಪಿ ಬಿಹಾರ ಸರ್ಕಾರದ ಅವರ ವಿರುದ್ಧ ಹರಿಹಾಯ್ದಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.