ಮೋದಿ ಸಿದ್ಧತೆ ಇಲ್ಲದೆ ಮಾತನಾಡುತ್ತಾರೆ: ಕಾಂಗ್ರೆಸ್
ನವದೆಹಲಿ: ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಯಾವುದೇ ಸಮಾರಂಭದಲ್ಲೂ ಪೂರ್ವಭಾವಿ ಸಿದ್ಧತೆ ಇಲ್ಲದೆ ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದು ಬುಧವಾರ ಕಾಂಗ್ರೆಸ್ ಕಿಡಿಕಾರಿದೆ.
ಮೋದಿ ಅವರು ಯಾವುದೇ ರ್ಯಾಲಿ, ಸಮಾರಂಭಗಳ್ಳಲಾಗಲಿ ಪೂರ್ವ ಸಿದ್ಧತೆ ಮಾಡಿಕೊಳ್ಳದೇ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ತಾವು ಏನನ್ನ ಬೆಂಬಲಿಗರಿಗೆ ಮತ್ತು ಸಮಾಜಕ್ಕೆ ಹೇಳುತ್ತಿದ್ದೇನೆ ಎಂಬುದರ ಬಗ್ಗೆ ಅರಿವಿಲ್ಲದೆ ಮಾತನಾಡುತ್ತಿದ್ದಾರೆ. ಓರ್ವ ಪ್ರಧಾನಿ ಅಭ್ಯರ್ಥಿಯಾಗಿರುವ ಮೋದಿಗೆ ಇದು ಶೋಭಿಸುವಂತದ್ದಲ್ಲ ಎಂದು ಸುದ್ದಿ ಮಾಧ್ಯಮವೊಂದಕ್ಕೆ ಕಾಂಗ್ರೆಸ್ ವಕ್ತಾರ ಮೀಮ್ ಅಫ್ಜಲ್ ಅವರು ಹೇಳಿದ್ದಾರೆ.
ಮೋದಿ ಅವರು ತಮ್ಮ ಭಾಷಣದ ವೇಳೆ, ಆಡಳಿತರೂಢ ಪಕ್ಷಗಳ ಮೇಲೆ ಇಲ್ಲ ಸಲ್ಲದ ಟೀಕೆಗಳನ್ನು ಮಾಡುತ್ತಿದ್ದಾರೆ. ಹೀಗೆ ಅವರು ಮಾಡಿರುವ ಟೀಕೆಗಳು ಅನೇಕ ವಿವಾದಗಳನ್ನು ಸೃಷ್ಟಿಸುತ್ತಿದ್ದು, ಅವರ ಭಾಷಣಕ್ಕೆ ಕವಡೆ ಕಾಸಿನ ಕಿಮ್ಮತ್ತು ಇಲ್ಲದಂತಾಗಿದೆ ಎಂದು ವ್ಯಂಗ್ಯವಾಡಿದರು.
ಕಳೆದ ವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ರಾಜಸ್ತಾನದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ಮುಜಾಫರ್ನಗರದ ಕೆಲ ಮುಸ್ಲಿಂ ಯುವಕರು ಪಾಕಿಸ್ತಾನ ಗುಪ್ತಚರ ಇಲಾಖೆ(ಐಎಸ್ಐ)ಯೊಂದಿಗೆ ನಿಕಟ ಸಂಪರ್ಕದಲ್ಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಇದನ್ನೇ ಗುರಿಯಾಗಿರಿಸಿಕೊಂಡು ಮೋದಿ ಅವರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದರು. ಆದರೆ ಈಗ ಮೋದಿ ಅವರು ಮಾಡುತ್ತಿರುವುದು ಏನು? ಪೂರ್ವ ನಿಯೋಜಿತ ಆಲೋಚನೆ ಇಲ್ಲದೆ ತಮ್ಮ ಮನಸ್ಸಿಗೆ ಬಂದಂತೆ ಮಾತನಾಡುತ್ತಿರುವುದು ಎಷ್ಟು ಸರಿ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

