ಪಾಟ್ನಾ ಸ್ಫೋಟ: ಬಂಧಿತ ಶಂಕಿತ ಉಗ್ರ ಆಲಂ ಪರಾರಿ

ಪಾಟ್ನಾ: ಪಾಟ್ನಾ ಸರಣಿ ಬಾಂಬ್ ಸ್ಫೋಟದ ಆರೋಪಿ ಮೆಹರ್ ಎ ಆಲಂ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ.
ಇದೇ ಅಕ್ಟೋಬರ್ 27ರಂದು ಪಾಟ್ನಾದಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಬಂಧಿತನಾಗಿದ್ದ ಶಂಕಿತ ಉಗ್ರ ಮಹರೆ ಎ ಆಲಂ ತನಿಖಾಧಿಕಾರಿಗಳಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಶಂಕಿತ ಉಗ್ರ ಮಹರೆ ಎ ಅಲಂನನ್ನು ಬಿಹಾರದ ದರ್ಬಾಂಗ್‌ನಲ್ಲಿ ಬಂಧಿಸಲಾಗಿತ್ತು.
ದೆಹಲಿ ವಿಮಾನ ನಿಲ್ದಾಣದಲ್ಲಿ ಮತ್ತೋರ್ವ ಶಂಕಿತನ ವಿಚಾರಣೆ
ಇದೇ ವೇಳೆ ಪಾಟ್ನಾ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಂಕಿತನೋರ್ವನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಶಂಕಿತನನ್ನು ಮಹಮದ್ ಅಫ್ಜಲ್ ಎಂದು ಗುರುತಿಸಲಾಗಿದ್ದು, ಈತ ಮತ್ತೋರ್ವ ಶಂಕಿತ ಉಗ್ರ ಉಜ್ಜೈರ್ ಅಹಮದ್ ಎಂಬಾತನ ಸಹಚರ ಎಂದು ಹೇಳಲಾಗುತ್ತಿದೆ. ಭಾರತದಲ್ಲಿರುವ ತನ್ನ ಪತ್ನಿಯನ್ನು ಭೇಟಿ ಮಾಡಲು ಇಂದು ಭಾರತಕ್ಕೆ ಭೇಟಿ ನೀಡಿದ್ದ ಅಫ್ಜಲ್‌ನನ್ನು ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳು ತೀವ್ರ ತಪಾಸಣೆ ನಡೆಸಿದ ನಂತರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ನಿನ್ನೆಯಷ್ಟೇ ರಾಷ್ಟ್ರೀಯ ತನಿಖಾದಳದ ಅಧಿಕಾರಿಗಳು ಉಜ್ಜೈರ್ ಅಹಮದ್‌ನನ್ನು ಪಾಟ್ನಾ ರೇಲ್ವೇ ನಿಲ್ದಾಣದಲ್ಲಿ ಬಂಧಿಸಿದ್ದರು. ಬಂಧಿತ ಉಜ್ಜೈರ್ ಅಹಮದ್ ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಸದಸ್ಯ ಇಮ್ತಿಯಾಜ್ ಅನ್ಸಾರಿಯೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


