ಈಗಿನ ಸುದ್ದಿ

ಅಸಾರಾಂ ಬಾಪುಗೆ 14ದಿನ ನ್ಯಾಯಾಂಗ ಬಂಧನ

ಅಸಾರಾಂ ಬಾಪುಗೆ 14ದಿನ ನ್ಯಾಯಾಂಗ ಬಂಧನ
Published On :

ಜೋಧ್‌ಪುರ್: ಸ್ವಯಂ ಘೋಷಿತ ದೇವಮಾನವ ಅಸಾರಾಂಬಾಪುಗೆ ಜೋಧ್‌ಪುರ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಜೋಧ್‌ಪುರ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಅಸಾರಾಂಬಾಪುವನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಹೆಚ್ಚಿನ ತನಿಖೆಗಾಗಿ ಆತನನ್ನು 14 ದಿನಗಳ ಕಾಲ ನ್ಯಾಯಾಂಗ ವಶಕ್ಕೆ ನೀಡಿದೆ.

ಜೋಧ್‌ಪುರದಲ್ಲಿರುವ ತನ್ನ ಆಶ್ರಮದಲ್ಲಿ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪವಿದ್ದು, ಪ್ರಕರಣ ಬೆಳಕಿಗೆ ಬಂದ ನಂತರ ಆತ ನಾಪತ್ತೆಯಾಗಿದ್ದನು. ನಿನ್ನೆ ಜೋಧ್‌ಪುರ ಪೊಲೀಸರು ಆತನನ್ನು ಅಜ್ಞಾತ ಸ್ಥಳದಿಂದ ಬಂಧಿಸಿ ಕರೆತಂದಿದ್ದರು. ಅಲ್ಲದೆ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದ ಪೊಲೀಸರು, ಆತ ಲೈಂಗಿಕವಾಗಿ ಸಮರ್ಥನಾಗಿದ್ದಾನೆ ಎಂಬ ಅಂಶವನ್ನು ಹೊರಹಾಕಿದ್ದರು.

ಪೊಲೀಸರ ವಶಕ್ಕೆ ಜೋಧ್‌ಪುರ ಆಶ್ರಮ?
ಈ ನಡುವೆ ಲೈಂಗಿಕ ಕಿರುಕಳ ಪ್ರಕರಣದಲ್ಲಿ ಸಿಲುಕಿ ಪೊಲೀಸರ ಅತಿಥಿಯಾಗಿರುವ ಅಸಾರಾಂ ಬಾಪುವಿನ ಜೋಧ್‌ಪುರದ ಅಶ್ರಮವನ್ನು ವಶಕ್ಕೆ ಪಡೆಯಲು ಪೊಲೀಸರು ಚಿಂತಿಸುತ್ತಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರದೊಂದಿಗೆ ಚರ್ಚಿಸುತ್ತಿರುವ ಪೊಲೀಸ್ ವರಿಷ್ಠಾಧಿಕಾರಿಗಳು ಶೀಘ್ರದಲ್ಲಿಯೇ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.