ಈಗಿನ ಸುದ್ದಿ

ದಾವೂದ್ ಇಬ್ರಾಹಿಂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಶಿಂಧೆ

ದಾವೂದ್ ಇಬ್ರಾಹಿಂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಶಿಂಧೆ
Published On :

ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ನಮ್ಮಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಹೇಳಿದ್ದಾರೆ.

ಮೋಸ್ಟ್‌ವಾಂಟೆಡ್ ಉಗ್ರ ಅಬ್ದುಲ್ ಕರೀಮ್ ತುಂಡಾ ಬಂಧನದ ಕೆಲವೇ ದಿನಗಳ ನಂತರ ಮತ್ತೋರ್ವ ಉಗ್ರ ಯಾಸಿನ್ ಭಟ್ಕಳ್ ಬಂಧನವಾಗಿದ್ದರ ಹಿನ್ನಲೆಯಲ್ಲಿ ಮಾತನಾಡಿದ ಗೃಹ ಸಚಿವ ಶಿಂಧೆ ಅವರು, ದಾವೂದ್ ಇಬ್ರಾಹಿಂ ಸಮೇತ ಶೀಘ್ರದಲ್ಲಿಯೇ ನಾವು ಎಲ್ಲ ಅಪರಾಧಿಗಳನ್ನು ಬಂಧಿಸುತ್ತೇವೆ. ಕಾನೂನಿಂದ ತಪ್ಪಿಸಿಕೊಳ್ಳಲು ಯಾರಿಗೂ ಆಸ್ಪದ ನೀಡುವುದಿಲ್ಲ. ಉಗ್ರರ ಬಂಧನಕ್ಕಾಗಿ ಕ್ರಮ ಕೈಗೊಂಡಿದ್ದೇವೆ ಎಂದು ಅವರು ಹೇಳಿದರು.

1993ರ ಮುಂಬೈ ಸರಣಿ ಸ್ಫೋಟದ ರೂವಾರಿಯಾಗಿರುವ ದಾವೂದ್ ಇಬ್ರಾಹಿಂ, ಉಗ್ರ ಸಂಘಟನೆಗಳೊಂದಿಗೆ ಸೇರಿ ಹಲವು ದುಷ್ಕೃತ್ಯದಲ್ಲಿ ಪಾಲ್ಗೊಂಡಿದ್ದನು. ಕ್ರಿಕೆಟ್ ಬೆಟ್ಟಿಂಗ್, ಬಾಂಬ್ ಸ್ಫೋಟ, ನಕಲಿ ನೋಟು ಚಲಾವಣೆಯಂತಹ ದೇಶದ ಆರ್ಥಿಕತೆಯನ್ನೇ ಬುಡಮೇಲು ಮಾಡುವ ಪಾಪ ಕೃತ್ಯಗಳಲ್ಲಿ ಭಾಗಿಯಾಗಿ ಭಾರತದ ಮೋಸ್ಟ್‌ವಾಂಟೆಡ್ ಉಗ್ರರ ಪಟ್ಟಿಯಲ್ಲಿ ಅಗ್ರಗಣ್ಯನಾಗಿದ್ದಾನೆ.

ಅಮೆರಿಕದ ತನಿಖಾ ಸಂಸ್ಥೆಗಳ ಮೂಲಗಳ ಪ್ರಕಾರ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಇಂದಿಗೂ ಅಲ್‌ಖೈದಾ ಸೇರಿದಂತೆ ಹಲವು ಉಗ್ರ ಸಂಘಟನೆಗಳೊಂದಿಗೆ ಸಂಪರ್ಕಹೊಂದಿದ್ದಾನೆ. ಪ್ರಸ್ತುತ ಪಾಕಿಸ್ತಾನ ಅಥವಾ ದುಬೈನಲ್ಲಿ ದಾವೂದ್ ಆಶ್ರಯ ಪಡೆದಿರಬಹುದು ಎಂದು ಶಂಕಿಸಲಾಗುತ್ತಿದೆ. ಅಂತೆಯೇ ದಾವೂದ್‌ನನ್ನು 'ಅಂತಾರಾಷ್ಟ್ರೀಯ ಭಯೋತ್ಪಾದಕ' ಪಟ್ಟಿಗೆ ಸೇರಿಸಲಾಗಿದ್ದು, ಅಮೆರಿಕ ಮತ್ತು ಭಾರತೀಯ ಗುಪ್ತಚರ ಸಂಸ್ಥೆಗಳು ಆತನ ಚಲನವಲನಗಳ ಕುರಿತು ತೀವ್ರ ನಿಗಾ ಇರಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.