ಸಂಸತ್ತಿನಲ್ಲಿ ತೆಲಂಗಾಣ ಗದ್ದಲ: 9 ಸಂಸದರ ಅಮಾನತು

ನವದೆಹಲಿ: ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ವಿರೋಧಿಸಿ ಲೋಕಸಭೆಯಲ್ಲಿ ಪದೇ ಪದೆ ಗದ್ದಲ ಮಾಡಿ, ಕಲಾಪಕ್ಕೆ ಅಡ್ಡಿಪಡಿಸಿದ ಆಂಧ್ರಪ್ರದೇಶದ ಒಂಬತ್ತು ಸಂಸದರನ್ನು ಸ್ಪೀಕರ್ ಮೀರಾ ಕುಮಾರ್ ಅವರು ಸೋಮವಾರ ಅಮಾನತುಗೊಳಿಸಿದ್ದಾರೆ.
ತೆಲುಗು ದೇಶಂ ಪಕ್ಷ(ಟಿಡಿಪಿ)ದ ನಾಲ್ವರು ಹಾಗೂ ಕಾಂಗ್ರೆಸ್ನ ಐದು ಸಂಸದರನ್ನು ಮೀರಾ ಕುಮಾರ್ ಅವರು ಮುಂದಿನ ಐದು ದಿನಗಳವರೆಗೆ ಅಮಾನತುಗೊಳಿಸಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಹಾಗೂ ಟಿಡಿಪಿ ಸಂಸದರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ, ಅಖಂಡ ಆಂಧ್ರಕ್ಕೆ ಒತ್ತಾಯಿಸಿ ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದರು.
ಈ ವೇಳೆ ಸ್ಪೀಕರ್ ಮೀರಾ ಕುಮಾರ್ ಅವರು, ಗದ್ದಲ ಮಾಡದಂತೆ ಸಂಸದರಲ್ಲಿ ಹಲವು ಬಾರಿ ಮನವಿ ಮಾಡಿದರು. ಆದರೆ ಅವರ ಮನವಿಗೆ ಕ್ಯಾರೆ ಎನ್ನದ ಸಂಸದರನ್ನು ತಾವು ಕಲಂ 374(ಎ) ಅಡಿ ಅಮಾನತುಗೊಳಿಸುತ್ತಿರುವುದಾಗಿ ಪ್ರಕಟಿಸಿದರು. ನಂತರ ಸದನವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


