ನಾಪತ್ತೆಯಾಗಿರುವ ಕಡತಗಳ ಪತ್ತೆಗೆ ಕ್ರಮ: ಪ್ರಧಾನಿ

ನವದೆಹಲಿ: ನಾಪತ್ತೆಯಾಗಿರುವ ಕಲ್ಲಿದ್ದಲು ಹಗರಣದ ಕಡತಗಳ ಪತ್ತೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಂಗಳವಾರ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಹೇಳಿದ್ದಾರೆ.
ಪ್ರತಿಪಕ್ಷಗಳ ಒತ್ತಡದ ಹಿನ್ನೆಲೆಯಲ್ಲಿ ಇಂದು ರಾಜ್ಯಸಭೆಯಲ್ಲಿ ಕಡತ ನಾಪತ್ತೆ ಪ್ರಕರಣ ಸಂಬಂಧ ಸ್ಪಷ್ಟನೆ ನೀಡಿದ ಪ್ರಧಾನಿ ಸಿಂಗ್, ಕಡತ ನಾಪತ್ತೆಗೆ ಸಂಬಂಧಿಸಿದಂತೆ ಸರ್ಕಾರ ಮುಚ್ಚಿಡುವಂತಹದ್ದು ಏನೂ ಇಲ್ಲ. ಈಗಾಗಲೇ ನಾಪತ್ತೆಯಾದ ಹಲವು ಕಡತಗಳು ಪತ್ತೆಯಾಗಿದ್ದು, ಇನ್ನುಳಿದ ಕಡತಗಳ ಪತ್ತೆಗಾಗಿ ಸಕಲ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.
ಪ್ರಕರಣ ಸಂಬಂಧ ಸಿಎಜಿ ಹಾಗೂ ಸಿಬಿಐಗೆ ಸರ್ಕಾರ ಎಲ್ಲ ರೀತಿಯ ನೆರವು ನೀಡುತ್ತಿದೆ. ತನಿಖಾ ತಂಡಕ್ಕೆ ಈಗಾಗಲೇ ಒಂದು ಲಕ್ಷ ಕಡತಗಳನ್ನು ನೀಡಲಾಗಿದೆ. ಹೀಗಾಗಿ ಈಗಲೇ ಕಡತಗಳು ನಾಪತ್ತೆಯಾಗಿವೆ ಎನ್ನುವುದು ಸರಿಯಲ್ಲ ಎಂದರು.
ಪ್ರಧಾನಿ ಹೇಳಿಕೆಯಿಂದ ಸಮಾಧಾನಗೊಳ್ಳದ ಪ್ರತಿಪಕ್ಷಗಳು, ರಾಜ್ಯಸಭೆಯಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿದವು. ನಮ್ಮ ಯಾವುದೇ ಪ್ರಶ್ನೆಗೂ ಪ್ರಧಾನಿಯವರು ಉತ್ತರ ನೀಡಿಲ್ಲ ಎಂದು ಬಿಜೆಪಿ ಪ್ರತಿಭಟಿಸಿತು. ಇದರಿಂದ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


