ಈಗಿನ ಸುದ್ದಿ

ಮೋದಿ ತಮ್ಮ ಸ್ವಹಿತಾಸಕ್ತಿಗಾಗಿ ನಮ್ಮನ್ನು ಬಳಸಿಕೊಂಡರು: ವಂಜಾರಾ

ಮೋದಿ ತಮ್ಮ ಸ್ವಹಿತಾಸಕ್ತಿಗಾಗಿ ನಮ್ಮನ್ನು ಬಳಸಿಕೊಂಡರು: ವಂಜಾರಾ
Published On :

ಅಹಮದಾಬಾಂಬ್: ಗುಜರಾತ್ ಪೊಲೀಸರನ್ನು ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ತಮ್ಮ ರಾಜಕೀಯ ಸ್ವಹಿತಾಸಕ್ತಿಗಾಗಿ ಬಳಸಿಕೊಂಡರು ಎಂದು ಹಿರಿಯ ಪೊಲೀಸ್ ಅಧಿಕಾರಿ ಡಿ.ಜಿ.ವಂಜಾರಾ ಆರೋಪಿಸಿದ್ದಾರೆ.

ಪೊಲೀಸ್ ಅಧಿಕಾರಿ ವಂಜಾರಾ ಅವರು ಇಂದು ಗುಜರಾತ್ ಸರ್ಕಾರಕ್ಕೆ ಬರೆದಿರುವ 10 ಪುಟಗಳ ಸುದೀರ್ಘ ಪತ್ರದಲ್ಲಿ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಮಾಜಿ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೋದಿ ಮತ್ತು ಅವರ ಆಪ್ತ ಅಮಿತ್ ಶಾ ಅವರು ತಮ್ಮನ್ನು ಮತ್ತು ತಮ್ಮ ತಂಡದ ಅಧಿಕಾರಿಗಳನ್ನು ಅನಾವಶ್ಯಕವಾಗಿ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಸೇರಿಸಿ ಕಿರುಕುಳ ನೀಡಿದ್ದಾರೆ ಎಂದು ವಂಜಾರಾ ಆರೋಪಿಸಿದ್ದಾರೆ.

'ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ತಮ್ಮ ದೆಹಲಿ ಪ್ರಯಾಣ(ಪ್ರಧಾನಿ ಪಟ್ಟ)ಕ್ಕಾಗಿ ಗುಜರಾತ್ ಪೊಲೀಸರನ್ನು ದಾಳವಾಗಿ ಉಪಯೋಗಿಸಿಕೊಂಡಿದ್ದಾರೆ. ಮೋದಿ ಅವರ ಆಪ್ತ ಮತ್ತು ಮಾಜಿ ಗೃಹ ಸಚಿವ ಅಮಿತ್ ಶಾ ಅವರು, ತಾವು ರಾಜಕೀಯವಾಗಿ ಬಲಾಢ್ಯರಾಗಲು ನಮ್ಮನ್ನು ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಸಿಲುಕಿಸಿ ಕಿರುಕುಳ ನೀಡುತ್ತಿದ್ದಾರೆ. ಇಷ್ಟೇ ಅಲ್ಲದೆ ಅಮಿತ್ ಶಾ ಅವರು ನರೇಂದ್ರ ಮೋದಿ ಅವರ ಹಾದಿಯನ್ನು ಕೂಡ ತಪ್ಪಿಸಿದ್ದಾರೆ. ಹೀಗಾಗಿಯೇ ನಾವು ನಮ್ಮದಲ್ಲದ ತಪ್ಪಿಗೆ ಸಿಲುಕಿ ವಿಚಾರಣೆ ಎದುರಿಸುತ್ತಿದ್ದೇವೆ'.

'ಮೋದಿಯವರನ್ನು ಪ್ರಧಾನಿ ಪಟ್ಟಕೇರಿಸಲು ಬಿಜೆಪಿ ಪಕ್ಷದವರೇ ಈ ನಕಲಿ ಎನ್‌ಕೌಂಟರ್‌ಗಳನ್ನು ಮಾಡಿಸಿ, ಅದನ್ನು ಪೊಲೀಸರ ಮೇಲೆ ಹೊರಿಸಿದ್ದಾರೆ. ಇದು ಖಾಸಗಿ ಮಾಧ್ಯಮವೊಂದರ ರಹಸ್ಯ ಕಾರ್ಯಾಚರಣೆಯಿಂದ ಬಯಲಾಗಿತ್ತು. ಇದರಿಂದ ತಪ್ಪಿಸಿಕೊಳ್ಳಲು ಅಮಿತ್ ಶಾ ಮತ್ತು ಅವರ ಸಂಗಡಿಗರು ನಮ್ಮನ್ನು ಪ್ರಕರಣದಲ್ಲಿ ಸಿಲುಕಿಸಿದ್ದಾರೆ' ಎಂದು ವಂಜಾರಾ ಆರೋಪಿಸಿದ್ದಾರೆ. ಅಲ್ಲದೆ ಇಂದು ತಮ್ಮ ಪೊಲೀಸ್ ಅಧಿಕಾರಿಯ ಸ್ಥಾನಕ್ಕೆ ಅಧಿಕೃತವಾಗಿ ರಾಜಿನಾಮೆ ಸಲ್ಲಿಸುತ್ತಿರುವುದಾಗಿ ವಂಜಾರಾ ತಿಳಿಸಿದ್ದಾರೆ.

ಇಶ್ರತ್ ಜಹಾನ್, ಸೊಹ್ರಾಬುದ್ದೀನ್ ಶೇಖ್ ಮತ್ತು ತುಳಸಿರಾಮ್ ಪ್ರಜಾಪತಿ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬಂಧನದಲ್ಲಿರುವ ಹಿರಿಯ ಪೊಲೀಸ್ ಅಧಿಕಾರಿ ವಂಜಾರಾ ಅವರನ್ನು ಗುಜರಾತ್ ಸರ್ಕಾರ ಈ ಹಿಂದೆಯೇ ಅಮಾನತು ಮಾಡಿತ್ತು. ಆದರೆ ಇಂದು ವಂಜಾರಾ ಅವರು ಅಧಿಕೃತವಾಗಿ ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿ ವಂಜಾರಾ ಅವರು ಬರೆದಿರುವ ಸುದೀರ್ಘ ಪತ್ರ ಇದೀಗ ಗುಜರಾತ್‌ನಲ್ಲಿ ಹೊಸ ವಿವಾದವನ್ನೇ ಸೃಷ್ಟಿಸಿದೆ. ಇದನ್ನೇ ಮುಂದಿಟ್ಟುಕೊಂಡಿರುವ ಕಾಂಗ್ರೆಸ್ ನಾಯಕರು ನರೇಂದ್ರ ಮೋದಿ ಅವರ ರಾಜಿನಾಮೆಗೆ ಆಗ್ರಹಿಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.