ಕಳಕಿಂತರಿಗೆ ಚುನಾವಣಾ ಟಿಕೆಟ್: ಸುಪ್ರೀಂನಲ್ಲಿ ಕೇಂದ್ರಕ್ಕೆ ಹಿನ್ನಡೆ

ನವದೆಹಲಿ: ಕಳಂಕಿತ ಸದಸ್ಯರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡದಿರುವ ನ್ಯಾಯಾಲಯದ ಆದೇಶವನ್ನು ಪುನರ್ ಪರಿಶೀಲಿಸಬೇಕೆಂಬ ಕೇಂದ್ರ ಸರ್ಕಾರದ ಮನವಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ, ಕಳಂಕಿತ ರಾಜಕಾರಣಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದೆಂಬ ತನ್ನ ಹಿಂದಿನ ಆದೇಶವನ್ನು ಎತ್ತಿ ಹಿಡಿಯಿತು. ಮನಮೋಹನ್ ಸಿಂಗ್ ನೇತೃತ್ವದಲ್ಲಿ ಆಗಸ್ಟ್ 22ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕಳಂಕಿತ ಅಥವಾ ನ್ಯಾಯಾಲಯದಲ್ಲಿ ವಿಚಾರಣಾಧೀನರಾಗಿರುವ ರಾಜಕಾರಣಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವ ಪ್ರಸ್ತಾಪಕ್ಕೆ ಅಂಗೀಕಾರ ನೀಡಲಾಗಿತ್ತು.
ಆದರೆ ಕೇಂದ್ರ ಸರ್ಕಾರದ ಈ ಪ್ರಸ್ತಾಪಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ನ್ಯಾಯಾಲಯ ಜುಲೈ 10 2013ರಂದು ಕಳಂಕಿತ ರಾಜಕಾರಣಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ನೀಡಬಾರದು ಎಂದು ಮಹತ್ವದ ಆದೇಶ ನೀಡಿತ್ತು. ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ್ದ ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್‌ನಲ್ಲಿ ಆದೇಶವನ್ನು ಪುನರ್ ಪರಿಶೀಲಿಸುವಂತೆ ಮನವಿ ಸಲ್ಲಿಸಿತ್ತು. ಆದರೆ ಇಂದು ನ್ಯಾಯಾಲಯ ಕೇಂದ್ರ ಸರ್ಕಾರದ ಮನವಿಯನ್ನು ತಿರಸ್ಕರಿಸಿದೆ.
ಈ ಹಿಂದೆ ನ್ಯಾಯಾಲಯದ ಆದೇಶವನ್ನು ತೀವ್ರವಾಗಿ ವಿರೋಧಿಸಿದ್ದ ರಾಜಕೀಯ ಪಕ್ಷಗಳು, ನ್ಯಾಯಾಲಯದ ಆದೇಶವನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ. ಸಂಸತ್ತಿನ ಪ್ರಾಧಾನ್ಯತೆಯನ್ನು ಕಾಪಾಡುವುದು ನಮ್ಮ ಕರ್ತವ್ಯವಾಗಿದ್ದು, ಸಂಸತ್ತಿನಲ್ಲಿ ಕೈಗೊಂಡ ನಿರ್ಣಯಗಳನ್ನು ಗೌರವಿಸಬೇಕು. ಅಗತ್ಯ ಬಿದ್ದರೆ ಮಸೂದೆಗಳಿಗೆ ತಿದ್ದುಪಡಿ ಮಾಡಲಾಗುವುದು ಎಂದು ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು.
ಕಳಂಕಿತ ರಾಜಕಾರಣಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವ ಕೇಂದ್ರ ಸರ್ಕಾರದ ನಿಲುವಿಗೆ ನ್ಯಾಯಾಲಯ ತಣ್ಣೀರೆರಚಿದ್ದು, ಇದರಿಂದ ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆಯಾದಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


