ನಗರಾಭಿವೃದ್ಧಿ ಮತ್ತು ಮೂಲಸೌರ್ಕಯಕ್ಕೆ ಆದ್ಯತೆ: ಮೇಯರ್

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಅಧಿಕಾರ ಸ್ವೀಕರಿಸಿದ ಕಟ್ಟೆ ಸತ್ಯನಾರಾಯಣ ಅವರು ಬೆಂಗಳೂರು ಅಭಿವೃದ್ಧಿ ಕುರಿತಂತೆ ಬುಧವಾರ ಹಲವಾರು ಭರವಸೆಗಳನ್ನು ನೀಡಿದ್ದಾರೆ.
ನೂತನ ಮೇಯರ್ ಆಗಿ ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಅಭಿವೃದ್ಧಿ, ನಗರಕ್ಕೆ ಮೂಲಸೌಕರ್ಯ ಕಲ್ಪಿಸಲು ಸೂಕ್ತ ಕ್ರಮ ಸೇರಿದಂತೆ ನಗರದ ಪ್ರಮುಖ ರಸ್ತೆಗಳ ಗುಂಡಿ ಮುಚ್ಚಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಇದೇ ವೇಳೆ, ರಸ್ತೆ ಡಾಂಬರೀಕರಣ ಸೇರಿ ಪ್ರಮುಖ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದೆ ಇದ್ದರೆ ಅಂತಹ ಅಧಿಕಾರಿಗಳಿಗೆ ಚಾಟಿ ಬೀಸಿ ಕೆಲಸ ಮಾಡಿಸುತ್ತೇವೆ. ಅಲ್ಲದೆ ಅಶಿಸ್ತಿನ ಅಧಿಕಾರಿಗಳು ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ನಗರದ ಅಭಿವೃದ್ಧಿಗೆ ಅಗತ್ಯ ಬಿದ್ದರೆ ಪೂರಕ ಬಜೆಟ್ ಮಂಡನೆ ಮಾಡಲಾಗುವುದು. ನಗರವನ್ನು ನೈರ್ಮಲ್ಯ ಹಾಗೂ ಕಸಮುಕ್ತ ನಗರವನ್ನಾಗಿ ಮಾಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಅಲ್ಲದೆ ಭಾರಿ ಪ್ರಮಾಣದಲ್ಲಿ ತ್ಯಾಜ್ಯ ಸಂಗ್ರಹವಾಗುವ ಕೆ.ಆರ್. ಮಾರುಕಟ್ಟೆಗೆ ಪ್ರತಿ ಸೋಮವಾರ ಭೇಟಿ ನೀಡಿ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಗಮನ ಹರಿಸಲಾಗುವುದು ಎಂದು ಮೇಯರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


