ಈಗಿನ ಸುದ್ದಿ

ಆರ್‌ಬಿಐ ಗವರ್ನರ್ ಆಗಿ ರಘುರಾಮ್ ರಾಜನ್ ಪದಗ್ರಹಣ

ಆರ್‌ಬಿಐ ಗವರ್ನರ್ ಆಗಿ ರಘುರಾಮ್ ರಾಜನ್ ಪದಗ್ರಹಣ
Published On :

ನವದೆಹಲಿ: ಭಾರತೀಯ ರಿಜರ್ವ್ ಬ್ಯಾಂಕಿನ 23ನೇ ಗವರ್ನರ್ ಆಗಿ ಹಿರಿಯ ಆರ್ಥಿಕ ತಜ್ಞ ರಘರಾಮ್ ರಾಜನ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.

ಆರ್‌ಬಿಐ ಗವರ್ನರ್ ಆಗಿದ್ದ ಸುಬ್ಬಾರಾವ್ ಅವರ ಅಧಿಕಾರ ಅವಧಿ ಇಂದಿಗೆ ಕೊನೆಯಾಗಿದ್ದು, ಆರ್‌ಬಿಐನ 23ನೇ ಗವರ್ನರ್ ಆಗಿ ಹಿರಿಯ ಆರ್ಥಿಕ ತಜ್ಞ ಮತ್ತು ಆರ್ಥಿಕ ಪ್ರಧ್ಯಾಪಕ ರಘುರಾಮನ್ ರಾಜನ್ ಅಧಿಕಾರ ಸ್ವೀಕರಿಸಿದ್ದಾರೆ. ನವದೆಹಲಿಯ ಆರ್‌ಬಿಐ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿರ್ಗಮಿತ ಗವರ್ನರ್ ಸುಬ್ಬಾರಾವ್ ಅವರು ರಘುರಾಮ್ ರಾಜನ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಅಧಿಕಾರ ಹಸ್ತಾಂತರ ಕಾರ್ಯಕ್ರಮದ ನಂತರ ಮಾತನಾಡಿದ ನಿರ್ಗಮಿತ ರಿಜರ್ವ್ ಬ್ಯಾಂಕ್ ಗವರ್ನರ್ ಸುಬ್ಬಾರಾವ್ ಅವರು, ನನ್ನ ಅಧಿಕಾರಾವಧಿ ಮುಕ್ತಾಯಗೊಂಡಿದ್ದು, ರಘುರಾಮ್ ರಾಜನ್ ಅವರಿಗೆ ಅಧಿಕಾರ ಹಸ್ತಾಂತರಿಸಿದ್ದೇನೆ. ನನ್ನ ಪ್ರಕಾರ ದೇಶದ ಆರ್ಥಿಕತೆ ಸಂಕಷ್ಟದಲ್ಲಿರುವ ಇಂತಹ ಪರಿಸ್ಥಿತಿಯಲ್ಲಿ ಈ ಸ್ಥಾನಕ್ಕೆ ರಘುರಾಮ್ ರಾಜನ್ ಅವರಿಗಿಂತಲೂ ಸೂಕ್ತ ವ್ಯಕ್ತಿ ಮತ್ತೊಬ್ಬರಿಲ್ಲ. ರಘುರಾಮ್ ರಾಜನ್ ಅವರ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದು, ಅವರು ಯಶಸ್ವಿಯಾಗಿ ತಮ್ಮ ಸ್ಥಾನವನ್ನು ನಿಭಾಯಿಸಲಿದ್ದಾರೆ ಎಂದು ಸುಬ್ಬಾರಾವ್ ವಿಶ್ವಾಸ ವ್ಯಕ್ತ ಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.