ಮುಂಬೈ ಅತ್ಯಾಚಾರಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಮುಂಬೈ: ಮುಂಬೈನ ಶಕ್ತಿ ಮಿಲ್ಸ್ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ್ದ 4 ಆರೋಪಿಗಳನ್ನು ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಮುಂಬೈನ ಶಕ್ತಿ ಮಿಲ್ಸ್ನಲ್ಲಿ ನಡೆದ ಪತ್ರಕರ್ತೆ ಅತ್ಯಾಚಾರ ಪ್ರಕರಣದ 4 ಆರೋಪಿಗಳ ಪೊಲೀಸ್ ಬಂಧನ ಅವಧಿ ಇಂದಿಗೆ ಕೊನೆಯಾದ ಹಿನ್ನಲೆಯಲ್ಲಿ ಎಲ್ಲ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳಾದ ಶಿರಾಜ್ ರೆಹ್ಮಾನ್ ಖಾನ್, ವಿಜಯ್ ಜಾದವ್, ಖಾಸಿಂ ಬೆಂಗಾಲಿ ಮತ್ತು ಸಲೀಂ ಅನ್ಸಾರಿ ಎಂಬ ನಾಲ್ಕು ಅತ್ಯಾಚಾರಿಗಳನ್ನು ಸೆಪ್ಟೆಂಬರ್ 19ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಈ ಹಿಂದೆ ಪ್ರಕರಣದ ಮತ್ತೋರ್ವ ಆರೋಪಿಯಾಗಿರುವ ಅಪ್ರಾಪ್ತ ಬಾಲಕನನ್ನು ಕಳೆದ ಆಗಸ್ಟ್ 30ರಂದು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿತ್ತು. ಅಂದು ನ್ಯಾಯಾಲಯ ಆತನನ್ನು ಡೋಂಗ್ರಿಯಲ್ಲಿರುವ ರಿಮ್ಯಾಂಡ್ ಹೋಮ್ಗೆ ದಾಖಲಿಸುವಂತೆ ಸೂಚಿಸಿತ್ತು.
ಆರೋಪಿ ಅಪ್ರಾಪ್ತನಾಗಿರುವುದರಿಂದ ಆತನ ಮನಃ ಪರಿವರ್ತನೆಗೆ ನ್ಯಾಯಾಲಯ ಅವಕಾಶ ನೀಡಿದ್ದು, ಆತ ನಾಲ್ಕು ವರ್ಷಗಳ ಕಾಲ ರಿಮ್ಯಾಂಡ್ ಹೋಮ್ನಲ್ಲಿ ಕಠಿಣ ಶಿಕ್ಷೆ ಅನುಭವಿಸಬೇಕಿದೆ. ಈ ನಾಲ್ಕು ವರ್ಷಗಳ ನಂತರವೂ ಆತನ ಮನಃ ಪರಿವರ್ತನೆಯಾಗದಿದ್ದರೆ ಮತ್ತೆ ಮೂರು ವರ್ಷಗಳ ಕಾಲ ಅಂದರೆ ಒಟ್ಟು ಏಳು ವರ್ಷಗಳ ರಿಮ್ಯಾಂಡ್ ಹೋಮ್ ಶಿಕ್ಷೆ ಅನುಭವಿಸಬೇಕಾಗುತ್ತದೆ. ಒಂದು ವೇಳೆ ಈ ಏಳು ವರ್ಷಗಳಲ್ಲಿಯೂ ಆತ ಬದಲಾಗದೇ ಇದ್ದರೆ ಆಗ ಆತನ ಶಿಕ್ಷೆ ಜೀವಾವಧಿ ಶಿಕ್ಷೆಯಾಗಿ ಮಾರ್ಪಾಟಾಗುತ್ತದೆ ಎಂದು ನುರಿತ ಕಾನೂನು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ಒಟ್ಟಾರೆ ಪತ್ರಕರ್ತೆಯ ಮೇಲೆ ನಡೆದ ಅತ್ಯಾಚಾರ ಪ್ರಕರಣದ ವಿಚಾರಣೆ ತ್ವರಿತಗತಿಯಲ್ಲಿ ಸಾಗುತ್ತಿದ್ದು, ಶೀಘ್ರದಲ್ಲಿಯೇ ಎಲ್ಲ ಆರೋಪಿಗಳಿಗೆ ಶಿಕ್ಷೆ ಪ್ರಕಟವಾಗುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


