ಅತ್ಯಾಚಾರಕ್ಕೆ ಒಳಗಾದ ಅಪ್ರಾಪ್ತೆಯೊಂದಿಗೆ ಆರೋಪಿ ಪುತ್ರನ ಮದುವೆಗೆ ಆದೇಶ!
ಜೈಪುರ: ಅತ್ಯಾಚಾರಕ್ಕೆ ಒಳಗಾದ ಆರು ವರ್ಷದ ಬಾಲಕಿಯೊಂದಿಗೆ ಆರೋಪಿ ಪುತ್ರ(8 ವರ್ಷ)ನೊಂದಿಗೆ ಮದುವೆ ಮಾಡಿ ಎಂದು ರಾಜಸ್ತಾನದಲ್ಲಿನ ಪಂಚಾಯ್ತಿಯೊಂದು ತೀರ್ಪು ನೀಡಿರುವುದಾಗಿ ಗುರುವಾರ ಪೊಲೀಸರು ತಿಳಿಸಿದ್ದಾರೆ.
ಜೈಪುರದಿಂದ 250 ಕಿ.ಮಿ ದೂರದಲ್ಲಿರುವ ಕೋಟಾದ ಕೇಶವ್ಪುರದಲ್ಲಿ ಈ ಘಟನೆ ನಡೆದಿದೆ. 15 ದಿನಗಳ ಹಿಂದೆ 40 ವರ್ಷದ ಕೈಲಾಶ್ ಎಂಬ ವ್ಯಕ್ತಿ ತನ್ನ ಪಕ್ಕದ ಮನೆಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ. ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ನೀಡುವ ಬದಲು ಗ್ರಾಮದವರೆಲ್ಲ ಪಂಚಾಯ್ತಿ ಸೇರಿ ಈ ತೀರ್ಮಾನಕ್ಕೆ ಬಂದಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಅತ್ಯಾಚಾರ ಎಸಗಿದ ಆರೋಪಿ ಕೈಲಾಶ್ ಪುತ್ರನಿಗೆ ನಿಮ್ಮ ಮಗಳನ್ನು ಕೊಟ್ಟು ಮದುವೆ ಮಾಡಿ ಎಂದು ಬಾಲಕಿ ಪೋಷಕರಿಗೆ ಪಂಚಾಯ್ತಿ ಆದೇಶಿಸಿದೆ. ಆದರೆ ಬಾಲಕಿಯ ಪೋಷಕರು ಹಾಗೂ ಕೈಲಾಶ್ ಇಬ್ಬರೂ ಪಂಚಾಯ್ತಿ ತೀರ್ಪುನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಈ ಸಂಬಂಧ ಇಬ್ಬರ ಮಧ್ಯೆ ಸಂಧಾನ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಮಧ್ಯೆ, ಕೇಶವ್ ಬುಧವಾರ ಮತ್ತೆ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ವಿಷಯ ತಿಳಿಯುತ್ತಿದ್ದಂತೆ ಕೆಲವು ಸಾಮಾಜಿಕ ಕಾರ್ಯಕರ್ತರು ಗ್ರಾಮಕ್ಕೆ ಆಗಮಿಸಿ, ಬಾಲಕಿ ಮತ್ತು ಆಕೆಯ ಪೋಷಕರನ್ನು ಕೋಟಾದ ಮಹಾವೀರನಗರ ಪೊಲೀಸ್ ಠಾಣೆಗೆ ಕರೆದೊಯ್ದು ದೂರು ದಾಖಲಿಸಿದ್ದಾರೆ. ಈ ಸಂಬಂಧ ಕೈಲಾಶ್ನನ್ನು ಬಂಧಿಸಲಾಗಿದ್ದು, ತನಿಖೆ ಮಾಡಲಾಗುತ್ತಿದೆ ಎಂದು ಠಾಣೆಯ ಪೊಲೀಸ್ ಅಧಿಕಾರಿ ಬನ್ವರಿ ಲಾಲ್ ಮೀನಾ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

