ಗೀತಿಕಾ ಶರ್ಮಾ ಆತ್ಮಹತ್ಯೆ: ಕಾಂಡಾಗೆ ಮಧ್ಯಂತರ ಜಾಮೀನು

ನವದೆಹಲಿ: ಗಗನ ಸಖಿ ಗೀತಿಕಾ ಶರ್ಮಾ ಆತ್ಮಹತ್ಯೆ ಪ್ರಕಣರ ಸಂಬಂಧ ಜೈಲು ಪಾಲಾಗಿದ್ದ ಹರಿಯಾಣ ಮಾಜಿ ಸಚಿವ ಗೋಪಾಲ್ ಕಾಂಡಾಗೆ ದೆಹಲಿ ಹೈಕೋರ್ಟ್ ಗುರುವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಕಾಂಡಾ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಇಂದು ಕಾಂಡಾ ಅವರಿಗೆ ಅಕ್ಟೋಬರ್ 4ರವರೆಗೆ ಮಧ್ಯಂತರ ಜಾಮೀನು ನೀಡಿದೆ.
ನಾಳೆಯಿಂದ ಪ್ರಾರಂಭವಾಗುವ ಹರಿಯಾಣ ವಿಧಾನಸಭೆ ಅಧಿವೇಶನದಲ್ಲಿ ಭಾಗವಹಿಸಲು ಒಂದು ತಿಂಗಳವರೆಗೆ ಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದು, ವಿಧಾನಸಭೆ ಅಧಿವೇಶನ ಮುಗಿದ ನಂತರ ಅಂದರೆ ಅಕ್ಟೋಬರ್ 4ರ ನಂತರ ಕೋರ್ಟ್ಗೆ ಖುದ್ದು ಹಾಜರಾಗಬೇಕೆಂದು ಸೂಚಿಸಿದೆ.
ಎಂಡಿಎಲ್ಆರ್ ವಿಮಾನ ಸಂಸ್ಥೆಯ ಮುಖ್ಯಸ್ಥರಾಗಿದ್ದ ಮಾಜಿ ಸಚಿವ ಗೋಪಾಲ್ ಕಾಂಡಾ ಅವರ ಸಂಸ್ಥೆಯಲ್ಲಿ ಗೀತಿಕಾ ಶರ್ಮಾ ಗಗನ ಸಖಿಯಾಗಿದ್ದರು. ಆದರೆ ಗೀತಿಕಾ ಶರ್ಮಾರಿಗೆ ಕಾಂಡಾ ಅವರು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರಿಂದ ಮನನೊಂದ್ದು ದೆಹಲಿಯ ಅಶೋಕ ವಿಹಾರದಲ್ಲಿರುವ ತಮ್ಮ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅಲ್ಲದೆ ಆತ್ಮಹತ್ಯೆಗೂ ಮುನ್ನ ತಮ್ಮ ಸಾವಿಗೆ ಗೋಪಾಲ್ ಕಾಂಡಾ ಅವರೇ ಕಾರಣ ಎಂದು ಪತ್ರ ಬರೆದಿಟ್ಟಿದ್ದರು. ಈ ಪತ್ರದ ಆಧಾರದ ಮೇಲೆ ದೆಹಲಿ ಪೊಲೀಸರು ಕಾಂಡಾರನ್ನು ಬಂಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


