ಈಗಿನ ಸುದ್ದಿ

ವಾಸ್ತು ದೋಷ: ವಿಷ್ಣು ಸಮಾಧಿ ಸ್ಥಳಾಂತರಕ್ಕೆ ಚಿಂತನೆ

ವಾಸ್ತು ದೋಷ:  ವಿಷ್ಣು ಸಮಾಧಿ ಸ್ಥಳಾಂತರಕ್ಕೆ ಚಿಂತನೆ
Published On :

ಬೆಂಗಳೂರು: ವಿಷ್ಣು ಸ್ಮಾರಕ ನಿರ್ಮಾಣದ ಬಗ್ಗೆ ರಾಜ್ಯ ಸರ್ಕಾರದ ನಿರಾಸಕ್ತಿ ಹಾಗೂ ವಾಸ್ತು ದೋಷದ ಹಿನ್ನೆಲೆಯಲ್ಲಿ ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ ಸಮಾಧಿ ಸ್ಥಳಾಂತರಕ್ಕೆ ಚಿಂತನೆ ನಡೆದಿದೆ.

ನಗರದ ಕೆಂಗೇರಿ ಬಳಿ ಇರುವ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಸಮಾಧಿ ಇದ್ದು, ವಾಸ್ತು ದೋಷ ಹಿನ್ನೆಲೆಯಲ್ಲಿ ಅದನ್ನು ಈಗ ಭಾರತಿ ವಿಷ್ಣುವರ್ಧನ್ ಅವರು ಮೈಸೂರಿಗೆ ಸ್ಥಳಾಂತರಿಸುತ್ತಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಭಾರತಿ, ಈಗೀರುವ ಸ್ಥಳದಲ್ಲಿ ಏನೋ ಸಮಸ್ಯೆ ಇರುವುದರಿಂದಲೇ ಸಮಾಧಿಯನ್ನು ಸ್ಥಳಾಂತರ ಮಾಡಲಾಗುತ್ತಿದೆ. ಎಲ್ಲಿ ಸ್ಥಳ ಸಿಗುತ್ತೋ ಅಲ್ಲಿಗೆ ಸ್ಥಳಾಂತರ ಮಾಡಲಾಗುವುದು. ಬೆಂಗಳೂರಿನಲ್ಲೇ ಬೇರೆ ಸ್ಥಳ ಸಿಕ್ಕರೆ ಸಂತೋಷವೇ. ಆದರೆ ಸ್ಥಳ ಸಿಗುತ್ತಿಲ್ಲ. ಹೀಗಾಗಿಯೇ ಮೈಸೂರಿಗೆ ಸ್ಥಳಾಂತರಿಸುವ ಚಿಂತನೆ ನಡೆದಿದೆ. ಅಲ್ಲದೆ ನಾವಾಗಿಯೇ ಏನೂ ಅಲ್ಲಿಗೆ ಹೋಗುತ್ತಿಲ್ಲ. ಅವರೇ(ವಿಷ್ಣು) ಆ ಸ್ಥಳವನ್ನು ಬಯಸುತ್ತಿದ್ದಾರೆ. ವಿಷ್ಣುಗೆ ಮೈಸೂರೆಂದರೆ ತುಂಬಾ ಇಷ್ಟ. ಅವರಿಗೆ ಮೈಸೂರಿನಲ್ಲಿರುವ ಆಸೆ ಇತ್ತು. ಹೀಗಾಗಿ ಮೈಸೂರಿನಲ್ಲಿ ಸ್ಮಾರಕವಾದರೆ ನನಗೂ ಸಂತೋಷ ಎಂದು ಹೇಳಿದ್ದಾರೆ.

ಈ ಸಂಬಂಧ ತಾವು ಇಂದು ಸಂಜೆ 5.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸುವುದಾಗಿ ಸಹ ಭಾರತಿ ತಿಳಿಸಿದ್ದಾರೆ.

ಇನ್ನು ಸಮಾಧಿ ಸ್ಥಳಾಂತರದ ಬಗ್ಗೆ ಅಭಿಮಾನಿಗಳ ವಿರೋಧದ ಬಗ್ಗೆ ಪ್ರತಿಕ್ರಿಯಿಸಿದ ಭಾರತಿ, ಅರ್ಥ ಇಲ್ಲದೇ ನಾವು ಏನೂ ಮಾಡುವುದಿಲ್ಲ. ಇದನ್ನು ಅಭಿಮಾನಿಗಳು ಅರ್ಥ ಮಾಡಿಕೊಳ್ಳಬೇಕು. ಸುಮ್ಮನೆ ಭಾವುಕರಾಗುವುದರಿಂದ ಏನೂ ಪ್ರಯೋಜನವಿಲ್ಲ. ನಾವು ಮಾಡುವುದೆಲ್ಲ ಅಭಿಮಾನಿಗಳಿಗೋಸ್ಕರ ಎಂದಿದ್ದಾರೆ.

ಸಮಾಧಿ ಸ್ಥಳಾಂತರಕ್ಕೆ ಅಭಿಮಾನಿಗಳ ಆಕ್ರೋಶ
ನಟ ವಿಷ್ಣುವರ್ಧನ್ ಅವರ ಸಮಾಧಿ ಸ್ಥಳಾಂತರಕ್ಕೆ ಅವರ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಯಾವುದೇ ಕಾರಣಕ್ಕೂ ಸಮಾಧಿ ಸ್ಥಳಾಂತರಿಸಬಾರದು ಎಂದು ಒತ್ತಾಯಿಸಿದ್ದಾರೆ. ಅಲ್ಲದೆ ಈ ಸಂಬಂಧ ವಿಷ್ಣು ಅವರ ಆಪ್ತ ಸ್ನೇಹಿತ ಹಾಗೂ ವಸತಿ ಸಚಿವ ಅಂಬರೀಷ್ ಅವರು ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.