ಈಗಿನ ಸುದ್ದಿ

ಕಾಂಗ್ರೆಸ್‌ನಿಂದ ಓಟ್ ಬ್ಯಾಂಕ್ ರಾಜಕಾರಣ: ಮೋದಿ

ಕಾಂಗ್ರೆಸ್‌ನಿಂದ ಓಟ್ ಬ್ಯಾಂಕ್ ರಾಜಕಾರಣ: ಮೋದಿ
Published On :

ಛತ್ತೀಸ್‌ಗಡ: ತೆಲಂಗಾಣ ರಾಜ್ಯ ರಚನೆಗೆ ಮುಂದಾಗಿರುವ ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಶನಿವಾರ ಆರೋಪಿಸಿದ್ದಾರೆ.

ಇಂದು ಅಂಬಿಕಾಪುರದಲ್ಲಿ ಬಿಜೆಪಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ತೆಲಂಗಾಣ ರಾಜ್ಯ ರಚನೆ ವಿಚಾರ ಕೇವಲ ಓಟ್ ಬ್ಯಾಂಕ್‌ಗಾಗಿ ಮಾಡುತ್ತಿದೆ. ಅಲ್ಲದೆ ಕಾಂಗ್ರೆಸ್ ಮುಂದಿನ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರತ್ಯೇಕ ರಾಜ್ಯ ರಚನೆಗೆ ಮುಂದಾಗಿದೆ ಎಂದು ಆರೋಪಿಸಿದರು.

ತೆಲಂಗಾಣ ರಾಜ್ಯ ರಚನೆಯೊಂದಿಗೆ ಕಾಂಗ್ರೆಸ್ ದೇಶದಲ್ಲಿ ಒಡೆದು ಆಳುವ ನೀತಿ ಅನುಸರಿಸುತ್ತಿದೆ. ಮತ್ತೆ ಅಧಿಕಾರಕ್ಕೆ ಬರಲು ಹವಣಿಸುತ್ತಿರುವ ಕಾಂಗ್ರೆಸ್ ಕೇವಲ ಮತಕ್ಕಾಗಿ ದೇಶವನ್ನು ಹೊಡೆಯುವ ಹುನ್ನಾರ ನಡೆಸುತ್ತಿದೆ ಎಂದರು.

ಡಾಲರ್ ಎದುರ ರೂಪಾಯಿ ಮೌಲ್ಯ ಕಳೆದುಕೊಂಡು ಕೋಮಾಸ್ಧಿತಿಗೆ ಹೋಗಿದೆ. ದೇಶದ ಆರ್ಥಿಕ ಪರಿಸ್ಥಿತಿ ಯಾರ ಅಂಕೆಗೂ ಸಿಗದಂತಾಗಿದೆ. ಇದು ಈಗೆ ಮುಂದುವರೆದರೆ ದೇಶದ ಆರ್ಥಿಕ ಸ್ಥಿತಿ ಅಧೋಗತಿಗೆ ತಲುಪುತ್ತದೆ. ಇಂತಹ ಸಂದರ್ಭದಲ್ಲೂ ಸರ್ಕಾರ ರೂಪಾಯಿ ಅಪಮೌಲ್ಯ ತಡೆಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದನ್ನು ಗಮನಿಸಿದರೆ ಕೇಂದ್ರ ಸರ್ಕಾರ ಆಡಳಿತ ನಡೆಸುವ ನೈತಿಕತೆ ಕಳೆದುಕೊಂಡಿದೆ ಎಂಬುದು ಸ್ಪಷ್ಟವಾಗುತ್ತದೆ. ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸುವಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ವಿಫಲರಾಗಿದ್ದಾರೆ ಎಂದು ಮೋದಿ ದೂರಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.