ಒರಿಸ್ಸಾ ಕಟ್ಟಡ ಕುಸಿತ: 4 ಸಾವು
ಭುವನೇಶ್ವರ್: ಇಲ್ಲಿನ ಪುರಿಯ ಬೀಚ್ ಟೌನ್ನಲ್ಲಿ ಭಾನುವಾರ ಎರಡು ಅಂತಸ್ಥಿನ ಪುರಾತನ ಕಟ್ಟಡವೊಂದು ಕುಸಿತಗೊಂಡ ಪರಿಣಾಮ 4 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಭುವನೇಶ್ವರ್ನಿಂದ 56 ಕಿ.ಮೀ ದೂರದಲ್ಲಿರುವ ಪುರಿಯ ಬೀಚ್ ಟೌನ್ನಲ್ಲಿರುವ ನೂರು ವರ್ಷಗಳ ಪುರಾತನ ಕಾಲದ ಶೀಥಿಲಗೊಂಡಿದ್ದ ಕಟ್ಟಡವೊಂದು ಇಂದು ಬೆಳಗಿನ ಜಾವ ಕುಸಿದಿದೆ. ಈ ಸಂದರ್ಭದಲ್ಲಿ ಕಟ್ಟಡ ಒಳಗೆ ನಿದ್ರಿಸುತ್ತಿದ್ದ 10 ಮಂದಿಯ ಪೈಕಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅನುಪ್ ಕುಮಾರ್ ಸಾಹು ತಿಳಿಸಿದ್ದಾರೆ.
ಈ ದುರ್ಘಟನೆ ಸುದ್ದಿ ತಿಳಿಯುತ್ತಿದಂತೆ ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಸ್ಥಳೀಯರ ನೇರವಿನೊಂದಿಗೆ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಆರು ಮಂದಿಯನ್ನು ರಕ್ಷಿಸುವಲ್ಲಿ ಯಶ್ವಸಿಯಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ಅನುಪ್ ಕುಮಾರ್ ಹೇಳಿದರು.
ಘಟನೆಗೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

