ಈಗಿನ ಸುದ್ದಿ

ಕೋಮುಗಲಭೆ ನಿಯಂತ್ರಿಸುವಲ್ಲಿ ಎಸ್‌ಪಿ ವಿಫಲ: ದಿಗ್ವಿಜಯ್

ಕೋಮುಗಲಭೆ ನಿಯಂತ್ರಿಸುವಲ್ಲಿ ಎಸ್‌ಪಿ ವಿಫಲ: ದಿಗ್ವಿಜಯ್
Published On :

ನವದೆಹಲಿ: ಮುಜಾಫರ್‌ನಗರ ಕಾವಲ್ ಪ್ರದೇಶದಲ್ಲಿ ಉಂಟಾಗಿರುವ ಕೋಮುಗಲಭೆಯನ್ನು ನಿಯಂತ್ರಿಸುವಲ್ಲಿ ಸಮಾಜವಾದಿ ಪಕ್ಷ(ಎಸ್‌ಪಿ) ವಿಫಲವಾಗಿದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಭಾನುವಾರ ಆರೋಪಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಉತ್ತರ ಪ್ರದೇಶದಲ್ಲಿ ಹಲವಾರು ಅಹಿತಕರ ಘಟನೆಗಳು ನಡೆಯುತ್ತಿದ್ದರು ಅವುಗಳನ್ನು ನಿಯಂತ್ರಿಸುವಲ್ಲಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಹರಿಹಾಯ್ದಿದ್ದಾರೆ. ಸಮಾಜವಾದಿ ಪಕ್ಷದ ಕಾರ್ಯಕ್ಷಮತೆ ಬರಬರುತ್ತಾ ಹಳಿ ತಪ್ಪುತ್ತಿದ್ದು, ಶಾಂತಿಯುತ ಆಡಳಿತ ನೀಡುವಲ್ಲಿ ಸರ್ಕಾರ ವಿಫಲವಾಗುತ್ತಿದೆ. ಅಲ್ಲದೆ, ಎಸ್‌ಪಿಗಿಂತ, ಬಿಎಸ್‌ಪಿ ಹೆಚ್ಚು ಸಮರ್ಥ ಆಡಳಿತ ನೀಡಿತ್ತು ಎಂದು ಟ್ವೀಟ್ ಮಾಡಿದ್ದಾರೆ.

ಇದೇ ವೇಳೆ, ಕೋಮುಗಲಭೆ ಸೃಷ್ಟಿಸುವಲ್ಲಿ ಬಿಜೆಪಿ ಸಮರ್ಥವಾಗಿದ್ದು, ಅಧಿಕಾರದಲ್ಲಿರುವ ಬಿಜೆಪಿಯೇತರ ಪಕ್ಷಗಳು ಹೆಚ್ಚು ಜಾಗರೂಕತೆಯಿಂದ ಇರಬೇಕಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಮುಜಾಫರ್‌ನಗರನಲ್ಲಿ ಉಂಟಾಗಿರುವ ಕೋಮುಗಲಭೆಯಿಂದಾಗಿ ರಾಜ್ಯದಲ್ಲಿ ಅಶಾಂತಿ ತಲೆದೋರಿದ್ದು, ಈ ಸಂಬಂಧ ಸರ್ಕಾರ ಕೂಡಲೆ ಎಚ್ಚೆತ್ತುಕೊಂಡು ಪರಿಸ್ಥಿತಿಯನ್ನು ನಿಯಂತ್ರಿಸಬೇಕು ಎಂದಿದ್ದಾರೆ.

ಕೋಮುಗಲಭೆಯಿಂದಾಗಿ ರಾಜ್ಯದಲ್ಲಿ ಪ್ರಕ್ಷುಬ್ದು ವಾತಾವರಣ ಸೃಷ್ಟಿಯಾಗಿದೆ. ಇದರಿಂದಾಗಿ ಜನರು ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಈ ಗಲಭೆ ವಿರುದ್ಧ ಕ್ರಮಕೈಗೊಂಡು ಶಾಂತಿಯುತ ವಾತವರಣ ನಿರ್ಮಾಣ ಮಾಡಬೇಕೆಂದು ಸಿಎಂಗೆ ಮನವಿ ಮಾಡಿದ್ದಾರೆ.

ಆಗಸ್ಟ್ 27ರಂದು ಕಾವಲ್ ಗ್ರಾಮದಲ್ಲಿ ನಡೆದ ಮೂವರ ಹತ್ಯೆಯ ನಂತರ ಈ ಪ್ರದೇಶದಲ್ಲಿ ಕೋಮುಗಲಭೆಗಳಾಗುತ್ತಿವೆ. ಈ ಗಲಭೆ ವರದಿ ಮಾಡಲು ತೆರಳಿದ್ದ ವರದಿಗಾರ ಸೇರಿದಂತೆ ನಿನ್ನೆ 12 ಮಂದಿ ಮೃತಪಟ್ಟಿದ್ದಾರೆ. ಘಟನೆಯಿಂದ ಇಂದು ಸಹ ಮುಜಾಫರ್‌ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಕರ್ಫೂ ವಿಧಿಸಲಾಗಿದೆ. ಅಲ್ಲದೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಸೇನೆಯನ್ನು ನಿಯೋಜಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.