ಪಾಕ್ ಅಧ್ಯಕ್ಷ ಜರ್ದಾರಿ ಪದತ್ಯಾಗ

ಇಸ್ಲಾಮಾಬಾದ್: ತಮ್ಮ ಐದು ವರ್ಷಗಳ ಅಧಿಕಾರ ಅವರ್ಧಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರು ಭಾನುವಾರ ಪದತ್ಯಾಗ ಮಾಡಿದ್ದಾರೆ.
ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ಬೆಂಬಲದೊಂದಿಗೆ 2008ರಲ್ಲಿ ಪಾಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಜರ್ದಾರಿ, ದೇಶದ ಚುನಾಯಿತ ಅಧ್ಯಕ್ಷರಾಗಿ ಅಧಿಕಾರವಧಿ ಪೂರ್ಣಗೊಳಿಸಿದ ಮೊದಲಿಗ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದು ಝಿನೆವಾ ವರದಿ ಮಾಡಿದೆ.
ಜರ್ದಾರಿ ಅವರು ಇಂದು ಲಾಹೋರ್ಗೆ ತೆರಳುವ ಮುನ್ನ ರಾಷ್ಟ್ರಪತಿಗಳ ಭವನದಲ್ಲಿ ಸಂಪ್ರದಾಯದಂತೆ ಅವರಿಗೆ ಸಶಸ್ತ್ರ ಪಡೆಗಳಿಂದ ಗೌರವ ವಂದನೆ ಸಲ್ಲಿಸಲಾಯಿತು. ಆದರೆ, ಈ ವೇಳೆ ಪ್ರಧಾನಿ ನವಾಜ್ ಷರೀಫ್ ಆಗಲಿ, ಸೇನಾಪಡೆಯ ಮೂರು ವಿಭಾಗಗಳ ಮುಖ್ಯಸ್ಥರಾಗಲಿ ಹಾಜರಿರಲಿಲ್ಲ.
ಅತ್ಯಂತ ಗೌರವ ಹಾಗೂ ಘನತೆಯಿಂದ ನನ್ನ ಐದು ವರ್ಷಗಳ ಅಧಿಕಾರವಧಿಯನ್ನು ಪೂರ್ಣಗೊಳಿಸಿರುವುದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ ಎಂದು ನಿನ್ನೆ ರಾತ್ರಿ ನಡೆದ ಭೋಜನಕೂಟದಲ್ಲಿ ಜರ್ದಾರಿ, ರಾಷ್ಟ್ರಪತಿ ಭವನದ ಸಿಬ್ಬಂದಿಗೆ ಹೇಳಿದ್ದರು ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


