ಈಗಿನ ಸುದ್ದಿ

ಬೆಂಗಳೂರು: ಕಾಡಾನೆ ದಾಳಿಗೆ ಬಾಲಕ ಬಲಿ

Published On :

ಬೆಂಗಳೂರು: ಬೆಂಗಳೂರಿನ ಹೊರವಲಯದಲ್ಲಿ ಭಾನುವಾರ ಕಾಡಾನೆ ದಾಳಿಗೆ ಓರ್ವ ಬಾಲಕ ಬಲಿಯಾಗಿದ್ದಾನೆ. ಇಂದು ಬೆಳಗ್ಗೆ ಕಾಡಿನಿಂದ ಬಂದ ಒಂಟಿ ಸಲಗವನ್ನು ನೋಡಲು ಹೋದ ಬಾಲಕ ಆನೆ ದಾಳಿ ತುತ್ತಾಗಿ ಸಾವನ್ನಪ್ಪಿದ ಘಟನೆ ಚುಂಚನಕಟ್ಟೆ ಸಮೀಪದ ದೊಡ್ಡಮಾರನಹಳ್ಳಿಯಲ್ಲಿ ನಡೆದಿದೆ.

ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಆನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಮೃತಪಟ್ಟ ಬಾಲಕನನ್ನು ಕಾರ್ತಿಕ್(12) ಎಂದು ಗುರುತಿಸಲಾಗಿದ್ದು, ಆನೆ ಅಟ್ಟಿಸಿಕೊಂಡು ಬಂದಾಗ ಕಾರ್ತಿಕ್ ಗುಂಡಿಯೊಳಗೆ ಬಿದಿದ್ದಾನೆ. ಹುಡುಗರ ಗುಂಪು ಕಂಡು ಕೋಪಗೊಂಡಿದ್ದ ಆನೆ ಕಾರ್ತಿಕ್‌ನನ್ನು ತುಳಿದು ಸಾಯಿಸಿದೆ.

ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ
ಆನೆ ದಾಳಿಗೆ ಸಿಕ್ಕು ಮೃತಪಟ್ಟಿರುವ ಬಾಲಕ ಕಾರ್ತಿಕ್ ಕುಟುಂಬದವರಿಗೆ ಐದು ಲಕ್ಷ ರುಪಾಯಿ ಪರಿಹಾರ ನೀಡುವುದಾಗಿ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಅವರು ಭರವಸೆ ನೀಡಿದ್ದಾರೆ.

ಮೃತ ಬಾಲಕನ ಕುಟುಂಬಕ್ಕೆ ಸಾಂತ್ವನ ಹೇಳಿರುವ ಶಾಸಕರು, ಬಾಲಕನ ಅಂತ್ಯಸಂಸ್ಕಾರಕ್ಕೆ ಬೇಕಾದ ಅಗತ್ಯ ಸಹಾಯ ನೀಡುವಂತೆ ತಹಶೀಲ್ದಾರ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.