ಈಗಿನ ಸುದ್ದಿ

ಜ್ಞಾನಭಾರತಿ ಗ್ಯಾಂಗ್‌ರೇಪ್: ನಾಪತ್ತೆಯಾಗಿದ್ದ ಆರೋಪಿ ಅಂದರ್

Published On :

ಬೆಂಗಳೂರು: ಬೆಂಗಳೂರು ವಿವಿಯ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಕಾನೂನು ವಿದ್ಯಾರ್ಥಿನಿ ಮೇಲೆ ನಡೆದಿದ್ದ ಗ್ಯಾಂಗ್‌ರೇಪ್ ಪ್ರಕರಣದ ಮೊದಲನೇ ಆರೋಪಿಯನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.

ಕಳೆದ 11 ತಿಂಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ರಾಜಾ ಅಲಿಯಾಸ್ ಮುತ್ತುರಾಜನನ್ನು ಇಂದು ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ.

ಮುತ್ತುರಾಜ ಸೇರಿದಂತೆ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಮೇಲೆ ಎಂಟು ಮಂದಿ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಪ್ರಕರಣದ ಏಳು ಅಪರಾಧಿಗಳಿಗೆ ಕಳೆದ ಸೋಮುವಾರ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು. ಆದರೆ ಮೊದಲನೇ ಆರೋಪಿಯಾಗಿದ್ದ ಈ ರಾಜಾ ನಾಪತ್ತೆಯಾಗಿದ್ದಾನೆ ಎಂದು ತನಿಖಾ ಅಧಿಕಾರಿಗಳು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದರು.

2012ರ ಅಕ್ಟೋಬರ್ 13ರಂದು ಜ್ಞಾನಭಾರತಿ ಆವರಣದಲ್ಲಿ ರಾತ್ರಿ ಪ್ರಿಯಕರನೊಂದಿಗೆ ಕಾರಿನಲ್ಲಿ ಮಾತನಾಡಿಕೊಂಡು ಕುಳಿತಿದ್ದಾಗ ಬಂದೆರಗಿದ 8 ಮಂದಿ ದುಷ್ಕರ್ಮಿಗಳು ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.