ಕೆಪಿಎಸ್ಸಿ ಅವ್ಯವಹಾರ: ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆ
ಬೆಂಗಳೂರು: ಗೆಜೆಟೆಡ್ ಪ್ರೊಬೆಷನರ್ಸ್ ಹುದ್ದೆಗೆ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ)ದ ಸಂದರ್ಶನ ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಬುಧವಾರ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದ್ದಾರೆ.
ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಸಿಐಡಿ ತನಿಖಾಧಿಕಾರಿಗಳು 200 ಪುಟಗಳ ಸವಿಸ್ತಾರ ವರದಿಯನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ, ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸಲ್ಲಿಸಿದ್ದಾರೆ. ಇದೇ ವೇಳೆ, ಐದು ಪ್ರಮುಖ ಶಿಫಾರಸ್ಸುಗಳನ್ನು ಮಾಡಿರುವ ಸಿಐಡಿ ಅಧಿಕಾರಿಗಳು ಕೆಪಿಎಸ್ಸಿ ನೇಮಕಾತಿಗಾಗಿ ನಡೆದ ಸಂದರ್ಶನದಲ್ಲಿ ಲೋಪಗಳು ನಡೆದಿದ್ದು, ಮರು ಸಂದರ್ಶನ ಮಾಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.
ಕೆಪಿಎಸ್ಸಿ ನೇಮಕಾತಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಸರ್ಕಾರ ಸಿಐಡಿಗೆ ಆದೇಶಿಸಿತ್ತು. ಅಲ್ಲದೆ ಒಂದು ತಿಂಗಳ ಒಳಗಾಗಿ ವಸ್ತುನಿಷ್ಠ ತನಿಖೆ ನಡೆಸಿ ಸಂಪೂರ್ಣ ವರದಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದರು.
362 ಗೆಜೆಟೆಡ್ ಪ್ರೊಬೆಷನರ್ ಹುದ್ದೆಗಳ ಭರ್ತಿಗಾಗಿ ಕೆಪಿಎಸ್ಸಿ ಲಿಖಿತ ಪರೀಕ್ಷೆ ಹಾಗೂ ಮೌಖಿಕ ಸಂದರ್ಶನ ನಡೆಸಿತ್ತು. ಆಯ್ಕೆ ಪ್ರಕ್ರಿಯೆ ಅಂತಿಮ ಹಂತ ತಲುಪಿತ್ತು. ಈ ಮಧ್ಯೆ ಲಿಖಿತ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದವರಿಗೆ ಸಂದರ್ಶನದಲ್ಲಿ ಕಡಿಮೆ ಅಂಕ ನೀಡಲಾಗಿದೆ. ಸಂದರ್ಶನದಲ್ಲಿ ಹೆಚ್ಚು ಅಂಕ ನೀಡಲು ಹಣದ ವ್ಯವಹಾರ ನಡೆದಿದೆ. ಕೆಪಿಎಸ್ಸಿ ಸದಸ್ಯರೇ ಅಭ್ಯರ್ಥಿಗಳಿಗೆ ದೂರವಾಣಿ ಕರೆ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂಬ ಆರೋಪಗಳು ಕೇಳಿಬಂದಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

