ಈಗಿನ ಸುದ್ದಿ

ನಾಲ್ಕೈದು ರೊಟ್ಟಿ ತಿನ್ನಿ, ಕಾಂಗ್ರೆಸ್‌ನ್ನು ಮತ್ತೆ ಅಧಿಕಾರಕ್ಕೆ ತನ್ನಿ: ರಾಹುಲ್

Published On :

ಜೈಪುರ್: ನಾಲ್ಕೈದು ರೊಟ್ಟಿ ತಿನ್ನಿ, ಕಾಂಗ್ರೆಸ್ ಅನ್ನು ಮತ್ತೆ ಅಧಿಕಾರಕ್ಕೆ ತನ್ನಿ ಎಂದು ಘೋಷಿಸುವ ಮೂಲಕ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಕಾರ್ಯಕರ್ತರನ್ನು ಉತ್ತೇಜಿಸಿದರು.

ವಿಧಾನಸಭಾ ಚುನಾವಣೆಯ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದರು. ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ಬಿಜೆಪಿಯನ್ನು ದಿಕ್ಕರಿಸಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಕಾಂಗ್ರೆಸ್ ತನ್ನ ಅಧಿಕಾರವದಿಯಲ್ಲಿ ದೇಶದಾಂದ್ಯಂತ ಉತ್ತಮ ಯೋಜನೆಗಳನ್ನು ತರುವ ಮೂಲಕ ದೇಶದ ಅಭಿವೃದ್ದಿಗಾಗಿ ದುಡಿಯುತ್ತಿದೆ. ದೆಹಲಿ ಮತ್ತು ರಾಜಸ್ಥಾನದಲ್ಲಿ ನಮ್ಮ ಪಕ್ಷ ಸಾಮಾನ್ಯ ಜನತೆಯ ಏಳಿಗೆಗಾಗಿ ದುಡಿಯುತ್ತಿದೆ. ಅಲ್ಲದೆ ಬಡತನ ನಿರ್ಮೂಲನೆಗಾಗಿ ಪಕ್ಷ ಶ್ರಮಿಸುತ್ತಿದ್ದು, ನಾವು ದೇಶಕ್ಕಾಗಿ ದುಡಿಯುತ್ತಿದ್ದೇವೆ ಎಂದರು.

ಇದೇ ವೇಳೆ, ನಿಮ್ಮ ಕನಸುಗಳನ್ನು ಪೂರೈಸುವ ಸಲುವಾಗಿ ನನ್ನ ಕನಸುಗಳನ್ನು ಬೇಕಾದರು ತ್ಯಜಿಸುತ್ತೇನೆ. ನಮ್ಮನ್ನು ದೂಷಿಸುವ ಅಧಿಕಾರ ನಿಮಗೆ ಇದೆ ಎಂದು ರಾಹುಲ್ ತಿಳಿಸಿದ್ದಾರೆ.

ಯುಪಿಎ ಸರ್ಕಾರ ಆಹಾರ ಭದ್ರತೆ ಕಾಯ್ದೆ ಜಾರಿಗೆ ತರುವ ಮೂಲಕ ದೇಶದ ಶೇ.67 ರಷ್ಟು ಜನತೆಗೆ ಕಡಿಮೆ ದರದಲ್ಲಿ ಆಹಾರ ಪದಾರ್ಥಗಳು ಸಿಗುವಂತೆ ಮಾಡಲು ಮುಂದಾಗಿದೆ. ಆದರೆ ಪ್ರತಿಪಕ್ಷಗಳು ಈ ಕಾಯ್ದೆಯ ಜಾರಿಗೆ ವಿರೋಧಿಸುತ್ತಿವೆ ಎಂದು ಟೀಕಿಸಿದರು.

ನಿನ್ನೆಯಷ್ಟೆ ನರೇಂದ್ರ ಮೋದಿ ಅವರು, ಜೈಪುರದಲ್ಲಿ ಬಿಜೆಪಿ ರ್ಯಾಲಿಯಲ್ಲಿ ಪಾಲ್ಗೊಂಡು ಕೇಂದ್ರ ಸರ್ಕಾರದ ಅಧಿಕಾರದ ವಿರುದ್ಧ ಹರಿಹಾಯ್ದಿದ್ದರು. ಬಿಜೆಪಿಗೆ ತಿರುಗೇಟು ನೀಡಲು ಕಾಂಗ್ರೆಸ್ ಇಂದು ಪ್ರಚಾರ ಕೈಗೊಂಡಿದ್ದು, ಬಿಜೆಪಿ ವಿರುದ್ಧ ತನ್ನ ಮಾತಿನ ಸಮರ ನಡೆಸಿತು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.