ಈಗಿನ ಸುದ್ದಿ

ಉ.ಪ್ರ.ಘರ್ಷಣೆ: ಸಾವಿನ ಸಂಖ್ಯೆ 48ಕ್ಕೆ ಏರಿಕೆ

ಉ.ಪ್ರ.ಘರ್ಷಣೆ: ಸಾವಿನ ಸಂಖ್ಯೆ 48ಕ್ಕೆ ಏರಿಕೆ
Published On :

ಮುಜಾಫರ್ನಗರ: ಉತ್ತರ ಪ್ರದೇಶದ ಮುಜಾಫರ್ನಗರ ಜಿಲ್ಲೆಯಲ್ಲಿ ಹೊತ್ತಿಕೊಂಡಿರುವ ಕೋಮು ಗಲಭೆಗೆ ಬಲಿಯಾದವರ ಸಂಖ್ಯೆ ಬುಧವಾರ 48ಕ್ಕೆ ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ.

ಈ ಮಧ್ಯೆ ಜಿಲ್ಲಾಡಳಿತ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ 12ರಿಂದ ಸಂಜೆ 4 ಗಂಟೆಯವರೆಗೆ ಕರ್ಫ್ಯೂ ಹಿಂಪಡೆಯಲಾಗಿದೆ ಎಂದು ಘೋಷಿಸಿದೆ. ನಿನ್ನೆ ಸಹ ಹಿಂಸಾಚಾರ ಪೀಡಿತ ಮೂರು ಜಿಲ್ಲೆಗಳಲ್ಲಿ ಎರಡು ಗಂಟೆಗಳ ಕಾಲ ಕರ್ಫ್ಯೂ ಸಡಿಲಿಸಲಾಗಿತ್ತು.

ಎರಡು ಕೋಮುಗಳ ನಡುವೆ ಹಿಂಸಾಚಾರ ಸಂಭವಿಸಿದ್ದ ಹಿನ್ನೆಲೆಯಲ್ಲಿ ಕಳೆದ ಶನಿವಾರ ಜಿಲ್ಲೆಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಎಡಿಜಿ(ಕಾನೂನು ಸುವ್ಯವಸ್ಥೆ) ಅರುಣ್ ಕುಮಾರ್ ಅವರು ತಿಳಿಸಿದ್ದಾರೆ.

ಅಖಿಲೇಶ್ ಎಚ್ಚರಿಕೆ: ಇದೇ ವೇಳೆ, ಕೋಮು ಹಿಂಸೆಗೆ ಪ್ರೇರೇಪಿಸುತ್ತಿರುವವರ ಹಾಗೂ  ರಾಜ್ಯದಲ್ಲಿ ಸೌಹಾರ್ದತೆ ಕೆಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಅಖಿಲೇಶ್ ಯಾದವ್ ಎಚ್ಚರಿಕೆ ನೀಡಿದ್ದಾರೆ. ಏತನ್ಮಧ್ಯೆ, ಈಗ ಉ.ಪ್ರದೇಶದ ಹಿಂಸಾಚಾರವನ್ನು ಸೂಕ್ತವಾಗಿ ನಿಯಂತ್ರಿಸದಿದ್ದರೆ ಅದು ಇತರೆ ರಾಜ್ಯಗಳಿಗೂ ವ್ಯಾಪಿಸುವ ಸಾಧ್ಯತೆಯಿದೆ. ಆಗ ಅದನ್ನು ನಿಯಂತ್ರಿಸಲಸಾಧ್ಯವಾಗಲಿದೆ ಎಂದು ಕೇಂದ್ರ ಸಚಿವ, ಆರ್ಎಲ್ಡಿ ನಾಯಕ ಅಜಿತ್ ಸಿಂಗ್ ಆತಂಕ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.