ಈಗಿನ ಸುದ್ದಿ

ಕೇದರಾನಾಥದಲ್ಲಿ ಮತ್ತೆ ಪೂಜಾ ಕೈಂಕರ್ಯ ಆರಂಭ

Published On :

ಡೆಹ್ರಾಡೂನ್/ಕೇದರಾನಾಥ: ಮೇಘಸ್ಫೋಟದಿಂದ ಸಂಭವಿಸಿದ ಪ್ರವಾಹದಿಂದ ನಲುಗಿಹೋಗಿದ್ದ ಕೇದರಾನಾಥ ಈಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, 86 ದಿನಗಳ ನಂತರ ಕೇದರಾನಾಥನಿಗೆ ಮತ್ತೆ ಪೂಜಾ ಕೈಂಕರ್ಯಗಳು ಆರಂಭವಾಗಿವೆ.

ಇಂದು ದೇವಸ್ಥಾನದಲ್ಲಿ ಭೀಮಾಶಂಕರ ಲಿಂಗ ಸ್ವಾಮೀಜಿ ಅವರ ನೇತೃತ್ವದಲ್ಲಿ ಸುಮಾರು 30ಕ್ಕು ಹೆಚ್ಚು ಅರ್ಚಕರು ಹೋಮ-ಹವನ ಕಾರ್ಯಗಳನ್ನು ನಡೆಸುವ ಮೂಲಕ ಮತ್ತೆ ಕೇದರಾನಾಥನ ಆರಾಧನೆಗೆ ಚಾಲನೆ ನೀಡಿದರು. ಇಂದಿನ ಪೂಜೆಯಲ್ಲಿ ಉತ್ತರಾಖಂಡ್ ಮುಖ್ಯಮಂತ್ರಿ ವಿಜಯ್ ಬಹುಗುಣ ಅವರು ಸಹ ಭಾಗವಹಿಸಿದ್ದರು.

ಕೇದರಾನಾಥವನ್ನು ಇಂದಿನಿಂದ ಸಾರ್ವಜನಿಕ ದರ್ಶನಕ್ಕೆ ಮುಕ್ತಗೊಳಿಸಲಾಗಿದ್ದು, ಪವಿತ್ರ ಯಾತ್ರಾಸ್ಥಳಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ.

ಕಳೆದ ಜೂನ್ ತಿಂಗಳಲ್ಲಿ ಸಂಭವಿಸಿದ್ದ ಭಾರಿ ಪ್ರವಾಹದಲ್ಲಿ ನೂರಾರು ಮಂದಿ ಮೃತಪಟ್ಟಿದ್ದರು. ಕೇದರಾನಾಥದಲ್ಲೇ 160ಕ್ಕು ಹೆಚ್ಚು ಮೃತದೇಹಗಳು ಪತ್ತೆಯಾಗಿದ್ದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.