ಈಗಿನ ಸುದ್ದಿ

ಮೋದಿಗೆ ಪಟ್ಟಾಭಿಷೇಕ: ಆಡ್ವಾಣಿ ಭೇಟಿ ಮಾಡಿದ ರಾಜನಾಥ್

ಮೋದಿಗೆ ಪಟ್ಟಾಭಿಷೇಕ: ಆಡ್ವಾಣಿ ಭೇಟಿ ಮಾಡಿದ ರಾಜನಾಥ್
Published On :

ನವದೆಹಲಿ: ನಾಳೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆ ಮಾಡುವುದು ಬಹುತೇಕ ಖಚಿತವಾಗಿದ್ದು, ಈ ಸಂಬಂಧ ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್ ಅವರು ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ಈಗಾಗಲೇ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿ ಮಾಡಿ ಎಂದು ಸ್ಪಷ್ಟವಾಗಿ ಸೂಚಿಸಿದೆ. ಆದರೆ ಆಡ್ವಾಣಿ ಅವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಅವರ ಮನವೊಲಿಕೆಗೆ ರಾಜನಾಥ್ ಸಿಂಗ್ ಕಸರತ್ತು ನಡೆಸುತ್ತಿದ್ದಾರೆ.

ಇಂದು ಆಡ್ವಾಣಿ ಅವರ ನಿವಾಸದಲ್ಲಿ ಅವರನ್ನು ಭೇಟಿ ಮಾಡಿರುವ ರಾಜನಾಥ್ ಸಿಂಗ್, ಶುಕ್ರವಾರ ನಡೆಯುವ ಸಂಸದೀಯ ಮಂಡಳಿಯ ಸಭೆಯಲ್ಲಿ ಪ್ರಧಾನಿ ಅಭ್ಯರ್ಥಿ ಸ್ಥಾನಕ್ಕೆ ಮೋದಿ ಹೆಸರನ್ನು ಅಂತಿಮಗೊಳಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಮೋದಿ ಪರ ದೇಶಾದ್ಯಂತ ಎದ್ದಿರುವ ಅಲೆ ಹಾಗೂ ಆರ್‌ಎಸ್‌ಎಸ್‌ನಿಂದ ಹೆಚ್ಚಿದ ಒತ್ತಡದಿಂದಾಗಿ ಬಿಜೆಪಿ ಮುಂಬರುವ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗೂ ಮುನ್ನವೆ ಪ್ರಧಾನಿ ಅಭ್ಯರ್ಥಿಯನ್ನು ಘೋಷಣೆ ಮಾಡುವ ತೀರ್ಮಾನಕ್ಕೆ ಬಂದಿದೆ. ಆದರೆ ಇದಕ್ಕೆ ಆಡ್ವಾಣಿ, ಲೋಕಸಭೆ ಪ್ರತಿಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಮತ್ತು ಮುರಳಿ ಮನೋಹರ್ ಜೋಶಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಮಧ್ಯಪ್ರದೇಶ, ಚತ್ತೀಸ್‌ಗಢ, ರಾಜಸ್ತಾನ ಹಾಗೂ ದೆಹಲಿ ವಿಧಾನಸಭೆ ಚುನಾವಣೆ ಮುಗಿಯುವರೆಗೂ ಮೋದಿ ಹೆಸರು ಘೋಷಿಸುವುದು ಬೇಡ ಎಂದು ಪಟ್ಟು ಹಿಡಿದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.