ಸಂಸದೀಯ ಮಂಡಳಿ ಸಭೆಯಲ್ಲಿ ಪ್ರಧಾನಿ ಅಭ್ಯರ್ಥಿ ನಿರ್ಧಾರ: ರವಿಶಂಕರ್

ನವದೆಹಲಿ: ಭಾರತೀಯ ಜನಾತಾ ಪಕ್ಷದ ಪ್ರಧಾನಿ ಅಭ್ಯರ್ಥಿಯನ್ನು ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗುತ್ತದೆ ಎಂದು ಪಕ್ಷದ ಹಿರಿಯ ಮುಖಂಡ ರವಿ ಶಂಕರ್ ಪ್ರಸಾದ್ ಹೇಳಿದ್ದಾರೆ.
ಖಾಸಗಿ ಸುದ್ದಿ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ರವಿಶಂಕರ್ ಪ್ರಸಾದ್ ಅವರು, ನರೇಂದ್ರ ಮೋದಿ ಅವರು ಪಕ್ಷದ ಖ್ಯಾತ ನಾಯಕರಾಗಿದ್ದು, ಅಂತೆಯೇ ಹಿರಿಯ ಮುಖಂಡ ಎಲ್.ಕೆ. ಅಡ್ವಾಣಿ ಅವರು ಪಕ್ಷದ ಗೌರವಾನ್ವಿತ ಮುಖಂಡರಾಗಿದ್ದಾರೆ. ಪ್ರಧಾನಿ ಅಭ್ಯರ್ಥಿಯ ಕುರಿತು ಪಕ್ಷದ ಸಂಸದೀಯ ಮಂಡಳಿಯಲ್ಲಿ ಚರ್ಚಿಸಿ ನಿರ್ಧರಿಸಲಾಗುತ್ತದೆ. ಸಂಸದೀಯ ಮಂಡಳಿಯಲ್ಲಿಯೇ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.
ಈ ಹಿಂದೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಮತ್ತೋರ್ವ ಮುಖಂಡ ಮತ್ತು ಪಕ್ಷದ ವಕ್ತಾರ ಮುಕ್ತಾರ್ ಅಬ್ಬಾಸ್ ನಖ್ವಿ ಅವರು, ಪ್ರಧಾನಿ ಅಭ್ಯರ್ಥಿ ಆಯ್ಕೆ ಕುರಿತು ಬಿಜೆಪಿ ಧೃಡ ನಿರ್ಧಾರ ಕೈಗೊಂಡಿದ್ದು, ಈ ಬಗ್ಗೆ ಯಾವುದೇ ರೀತಿಯ ಗೊಂದಲಗಳಿಲ್ಲ. ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್ ಸೂಕ್ತ ಸಮಯದಲ್ಲಿ ಪ್ರಧಾನಿ ಅಭ್ಯರ್ಥಿ ಹೆಸರನ್ನು ಘೋಷಿಸಲಿದ್ದಾರೆ ಎಂದು ಹೇಳಿದ್ದರು.
ಮೂಲಗಳ ಪ್ರಕಾರ ಬಿಜೆಪಿ ಪ್ರಧಾನಿ ಅಭ್ಯರ್ಥಿಯಾಗಿ ಗುಜರಾತ್ ಮುಖ್ಯಮಂತ್ರಿ ನರೇಂದ್ರಮೋದಿ ಬಿಜೆಪಿ ಆಯ್ಕೆ ಮಾಡಿದ್ದು, ಇದೇ ಸೆಪ್ಟೆಂಬರ್ 13ರಂದು ನಡೆಯುವ ಸಂಸದೀಯ ಮಂಡಳಿ ಸಭೆಯಲ್ಲಿ ಅಧಿಕೃತವಾಗಿ ಘೋಷಿಸಲಾಗುತ್ತದೆ ಎಂದು ತಿಳಿದು ಬಂದಿದೆ.
ಮೋದಿ ಪಟ್ಟಾಭಿಷೇಕಕ್ಕೆ ಕಾಲ ಸನ್ನಿಹಿತವಾಗಿದ್ದು, ಇದೇ ಶುಕ್ರವಾರ ನಡೆಯುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಪ್ರಧಾನಿ ಅಭ್ಯರ್ಥಿಯಾಗಿ ಮೋದಿ ಅವರ ಹೆಸರನ್ನು ಘೋಷಿಸುವ ಸಾಧ್ಯತೆ ಇದೆ. ಆದರೆ ಅಂದಿನ ಸಭೆಯಲ್ಲಿ ಬಿಜೆಪಿಯ ಕೆಲ ಹಿರಿಯ ನಾಯಕರಾದ ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ ಸೇರಿದಂತೆ ಹಲವು ನಾಯಕರು ಐದು ರಾಜ್ಯಗಳ ಚುನಾವಣೆ ಮುಗಿದ ಬಳಿಕ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಬೇಕು ಎಂದು ಒತ್ತಡ ಹೇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


