ಮುಂದಿನ ವಾರ ಮುಜಾಫರ್ನಗರಕ್ಕೆ ಸೋನಿಯಾ, ರಾಹುಲ್ ಭೇಟಿ
ಮುಜಾಫರ್ನಗರ: ಉತ್ತರ ಪ್ರದೇಶದ ಹಿಂಸಾಚಾರ ಪೀಡಿತ ಮುಜಾಫರ್ನಗರ ಜಿಲ್ಲೆಗೆ ಮುಂದಿನ ವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಭೇಟಿ ನೀಡಲಿದ್ದಾರೆ.
ಮುಂದಿನ ವಾರ ಕೋಮುಗಲಭೆ ಪೀಡಿತ ಮುಜಾಫರ್ನಗರಕ್ಕೆ ಸೋನಿಯಾ ಹಾಗೂ ರಾಹುಲ್ ಗಾಂಧಿ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಉತ್ತರ ಪ್ರದೇಶ ಉಸ್ತುವಾರಿ ಮಧುಸೂದನ್ ಮಿಸ್ತ್ರಿ ಅವರು ಗುರುವಾರ ವರದಿಗಾರರಿಗೆ ತಿಳಿಸಿದ್ದಾರೆ.
ಮುಜಾಫರ್ನಗರ ಕೋಮುಗಲಭೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ ಮಿಸ್ತ್ರಿ, ಹಿಂಸಾಚಾರಕ್ಕೆ ಪ್ರಚೋದನೆ ನೀಡಲು ಅವಕಾಶ ನೀಡಬಾರದು ಎಂದರು. ಅಲ್ಲದೆ ಕೋಮುಗಲಭೆಯ ಹಿಂದೆ ಗುಜರಾತ್ ಬಿಜೆಪಿ ಕಾರ್ಯಕರ್ತರ ಕೈವಾಡ ಇದೆ ಎಂದು ಆರೋಪಿಸಿದರು.
ಇದೇ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮಿಸ್ತ್ರಿ, ರಾಜ್ಯ ಸರ್ಕಾರವನ್ನು ವಜಾಗೊಳಿಸಲು ಹಲವು ನಿಯಮಗಳಿವೆ. ಆದರೆ ಸದ್ಯಕ್ಕೆ ಅಂತಹ ಯಾವುದೇ ಯೋಚನೆ ಕೇಂದ್ರ ಸರ್ಕಾರದ ಮುಂದಿಲ್ಲ ಎಂದು ಮಿಸ್ತ್ರಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

