ಈಗಿನ ಸುದ್ದಿ

ಸೀಮಾಂಧ್ರ ವಿದ್ಯುತ್ ಇಲಾಖೆ ನೌಕರರ ಧರಣಿ

Published On :

ಹೈದರಾಬಾದ್: ಆಂಧ್ರ ಪ್ರದೇಶದಲ್ಲಿ ನಡೆಯುತ್ತಿರುವ ತೆಲಂಗಾಣ ವಿರೋಧಿ ಹೋರಾಟ ಈಗ ಮತ್ತಷ್ಟು ತೀವ್ರಗೊಂಡಿದ್ದು, ಇಂದಿನಿಂದ ವಿದ್ಯುತ್ ಇಲಾಖೆಯ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಈಗಾಗಲೇ ಆಂಧ್ರ ಪ್ರದೇಶ ವಿಭಜನೆಯನ್ನು ಖಂಡಿಸಿ ರಾಜ್ಯಾದ್ಯಂತ ಹೋರಾಟ ನಡೆಯುತ್ತಿದ್ದು, ಇಂದಿನಿಂದ ಆಂಧ್ರದ ವಿದ್ಯುತ್ ಇಲಾಖೆಯ ನೌಕರರು 72 ಗಂಟೆಗಳ ಪ್ರತಿಭಟನೆ ಆರಂಭಿಸಿದ್ದು, ಆಂಧ್ರ ಪ್ರದೇಶ ವಿಭಜನೆ ಆದೇಶವನ್ನು ಕೇಂದ್ರ ಸರ್ಕಾರ ಹಿಂಪಡೆಯದಿದ್ದರೆ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಆಂಧ್ರ ಪ್ರದೇಶದಾದ್ಯಂತ 13 ಜಿಲ್ಲೆಗಳಲ್ಲಿರುವ ವಿದ್ಯುತ್ ಇಲಾಖೆಯ ಸುಮಾರು 30 ಸಾವಿರ ನೌಕರರು ಮತ್ತು ಸುಮಾರು 20 ಸಾವಿರ ಗುತ್ತಿಗೆ ಆಧಾರಿತ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ನೌಕರರ ಈ ಪ್ರತಿಭಟನೆಯಿಂದಾಗಿ ಆಂಧ್ರ ಪ್ರದೇಶದಲ್ಲಿ ಉತ್ಪಾದನೆಯಾಗುತ್ತಿದ್ದ ಸುಮಾರು 7 ಸಾವಿರದ 196 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಅಲ್ಲದೆ ಆಂಧ್ರ ಪ್ರದೇಶ ರಾಜ್ಯಕ್ಕೆ ಹೊಂದಿಕೊಂಡಿರುವ ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ಗಡಿ ಜಿಲ್ಲೆಗಳಲ್ಲಿ ಅಕ್ಷರಶಃ ವಿದ್ಯುತ್ ಕ್ಷಾಮ ಏರ್ಪಡುವ ಭೀತಿ ಶುರುವಾಗಿದೆ.

ವಿದ್ಯುತ್ ನೌಕರರ ಧರಣಿಯ ಆರಂಭಿಕ ಭಾಗವಾಗಿ ಇಂದು ಆಂಧ್ರ ಪ್ರದೇಶದಾದ್ಯಂತ ವಿವಿಧ ಸಮಯಗಳಲ್ಲಿ ಒಟ್ಟು 3 ಗಂಟೆಗಳ ಕಾಲ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಲಾಗುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.