ಗೋಡೆ ಕುಸಿತ: 2 ಸಾವು

ಬೆಂಗಳೂರು: ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಮನೆ ಗೋಡೆ ಕುಸಿದು ಒಂದೇ ಕುಟುಂಬದ ಬಾಲಕರಿಬ್ಬರು ಶನಿವಾರ ಮೃತಪಟ್ಟಿದ್ದಾರೆ.
ನಿನ್ನೆ ಸುರಿದ ಮಳೆಯಿಂದಾಗಿ ನಗರದ ದೊಮ್ಮಲೂರಿನ ಎ.ಕೆ. ಕಾಲೋನಿ ಬಳಿ ಮನೆಯ ಗೋಡೆಯೊಂದು ಕುಸಿದಿದ್ದು, ಗೋಡೆ ಪಕ್ಕದಲ್ಲಿ ಮಲಗಿದ್ದ ಮನೋಜ್(14) ತನೋಜ್(12) ಮೇಲೆ ಗೋಡೆ ಅಪ್ಪಳಿಸಿದ್ದು ಅಣ್ಣ-ತಮ್ಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆದರೆ ಅದೃಷ್ಟವಶಾತ್ ತಾಯಿ ಕೂದಲೆಳೆಯಲ್ಲಿ ಪಾರಾಗಿದ್ದಾರೆ.
ಸುದ್ದಿ ತಿಳಿದ ಕೂಡಲೆ ಸ್ಥಳಕ್ಕೆ ಆಗಮಿಸಿದ ಬೆಂಗಳೂರು ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಅವರು ಪರಿಶೀಲನೆ ನಡೆಸಿದರು. ಅಲ್ಲದೆ ಮೃತಪಟ್ಟ ಕುಟುಂಬಕ್ಕೆ ಸರ್ಕಾರದ ವತಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದರು. ಇದೇ ವೇಳೆ ಬಿಬಿಎಂಪಿ ಮೇಯರ್ ಕಟ್ಟೆ ಸತ್ಯನಾರಾಯಣ ಹಾಗೂ ಬಿಬಿಎಂಪಿ ಆಯುಕ್ತ ಎಂ. ಲಕ್ಷಿನಾರಾಯಣ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಬಿಬಿಎಂಪಿ ವತಿಯಿಂದ ತಲಾ 1 ಲಕ್ಷ ರು. ಪರಿಹಾರ ನೀಡುವುದಾಗಿ ಘೋಷಿಸಿದರು.
ಮನೆ ಗೋಡೆ ಕುಸಿದ ಪರಿಣಾಮ ಮನೆ ಸಂಪೂರ್ಣವಾಗಿ ನೆಲಸಮವಾಗಿದೆ, ಆದರೆ ಅಕ್ಕಪಕ್ಕದ ಮನೆಗಳಿಗೆ ಯಾವುದೇ ಹಾನಿಯಾಗಿಲ್ಲ. ಶೀಘ್ರದಲ್ಲೆ ಕಟ್ಟಡ ತೆರವು ಕಾರ್ಯ ನಡೆಸುವುದಾಗಿ ಕಟ್ಟೆ ಸತ್ಯನಾರಾಯಣ ಹೇಳಿದರು.
ಸ್ಥಳಕ್ಕೆ ಭೇಟಿ ನೀಡಿದ್ದ ಶಾಂತಿನಗರದ ಶಾಸಕ ಎಸ್.ಎ ಹ್ಯಾರಿಸ್ ಅವರು, ಎ.ಕೆ. ಕಾಲೋನಿಯಲ್ಲಿ ಸುಮಾರು 40 ಮನೆಗಳಿದ್ದು, ಪಕ್ಕದಲ್ಲೆ ರಕ್ಷಣಾ ಇಲಾಖೆಯ ಜಾಗವಿರುವುದರಿಂದ ಈ ಜಾಗದಲ್ಲಿ ವಾಸಿಸುವ ಜನರಿಗೆ ಹಕ್ಕು ಪತ್ರಗಳನ್ನು ನೀಡಲು ಸಾಧ್ಯವಾಗಿಲ್ಲ. ಈ ಕಾಲೋನಿಗೆ ಸಂಬಂಧಪಟ್ಟಂತೆ ರಕ್ಷಣಾ ಇಲಾಖೆ ಜೊತೆ ವಿವಾದವಿರುದರಿಂದ ಈ ಸಂಬಂಧ ರಕ್ಷಣಾ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ನಿವಾಸಿಗಳಿಗೆ ಮನೆಗಳನ್ನು ಕಟ್ಟಿಕೊಡುವ ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


